ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ ೨೮ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೧೬ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದ್ದು, ಜಿಲ್ಲೆಯ ಗಣ್ಯರು, ಮುಖಂಡರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.