ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಅವಧಿಯನ್ನು ಅಕ್ಟೋಬರ್ ೨೦ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ವಿವಿ ಪ್ರಾದೇಶಿಕ ನಿರ್ದೇಶಕರಾದ ಮೈತ್ರಿ ಡಿ.ಎಸ್.ಅವರು ತಿಳಿಸಿದ್ದಾರೆ.
ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಸ್ತುತ ೨೦೨೩-೨೪ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶ ಆರಂಭಿಸಿದ್ದು, ಸ್ನಾತಕ, ಸ್ನಾತಕೋತ್ತರ ಕೋರ್ಸ್ಗಳಿಗೆ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ ೨೦ ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ (ಐಟಿ) ಹಾಗೂ ಬಿಎಸ್ಸಿ (೧೪ ಕಾಂಬಿನೇಷನ್ಸ್), ಬಿಎಸ್‌ಡಬ್ಲೂ, ಬಿಎಲ್‌ಐಎಸ್ಸಿ, ಎಂ.ಎ, ಎಂ.ಕಾಂ, ಎಂಬಿಎ, ಎಂ.ಎಲ್.ಐ.ಎಸ್ಸಿ, ಎಂ.ಎಸ್ಸಿ, ಎಂಸಿಎ ಪಿಜಿ ಸರ್ಟಿಫಿಕೇಟ್ ಪ್ರೊಗ್ರಾಮ್ಸ್, ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮಗಳಿಗೆ ಪ್ರವೇಶ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಕೋರ್ಸ್ಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದಾಗಿದೆ.
ವಿಜಯಪುರ ಪ್ರಾದೇಶಿಕ ಕೇಂದ್ರ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ರವಿವಾರದಂದು ಕೂಡ ಅಕ್ಟೋಬರ್ ೨೦ರವರೆಗೆ ಕಾರ್ಯನಿರ್ವಹಿಸಲಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ವಿ.ಎಸ್.ಜಿ, ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆವರಣ, ಆಕಾಶವಾಣಿ ಕೇಂದ್ರದ ಎದುರುಗಡೆ, ರಿಂಗ್ ರಸ್ತೆ, ವಿಜಯಪುರ ಮೊ: ೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩, ೯೧೧೦೨೫೬೭೩೮ ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

