ಉದಯರಶ್ಮಿ ದಿನಪತ್ರಿಕೆ
ಚಡಚಣ: ಪಟ್ಟಣದ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇತಿಹಾಸ ಹಾಗೂ ಅರ್ಥಶಾಸ್ತ್ರದ ವಿಭಾಗದ ಅಡಿಯಲ್ಲಿ ವಿಶ್ವ ಪ್ರವಾಸೋದ್ಯಮದ ದಿನದ ಅಂಗವಾಗಿ ಪರಂಪರೆಯಿಂದ ಜೀವನೋಪಾಯದವರೆಗೆ ಎಂಬ ವಿಷಯದ ಕುರಿತು ಒಂದು ದಿನದ ವಿಶೇಷ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ. ಅಪ್ಪು ಜಾಧವ ಮಾತನಾಡಿ ಪ್ರವಾಸೋದ್ಯಮದ ಪ್ರಾಮುಖ್ಯತೆ ಮತ್ತು ಅದರ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಮತ್ತು ಆರ್ಥಿಕ ಮೌಲ್ಯಗಳ ಬಗ್ಗೆ ಅಂತರರಾಷ್ಟ್ರೀಯ ಸಮುದಾಯದಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಡಾ.ಎಸ್.ಎಸ್. ದೇಸಾಯಿ ಪ್ರವಾಸೋದ್ಯಮವು ವಿಶ್ವದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿದೆ. ಭಾರತದಂತ ಬೃಹತ್ ಪ್ರಜಾಪ್ರಭುತ್ವ ದೇಶದ ಮೇಲೆ ಆರ್ಥಿಕ ಪ್ರಭಾವವನ್ನು ಬೀರುವ ಶಕ್ತಿ ಹಾಗೂ ಸಾಮರ್ಥ್ಯ ಪ್ರವಾಸೋದ್ಯಮಕ್ಕೆ ಇದೆ. ಅದಲ್ಲದೆ ಸಾಕಷ್ಟು ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ಅವಕಾಶ ಕೂಡ ಇದರಲ್ಲಿ ಅಡಕವಾಗಿದೆ ಎಂದರು.
ಡಾ. ಮಯೂರ್ ಕುದುರಿ ನಿರೂಪಿಸಿ, ಸ್ವಾಗತಿಸಿದರು, ಡಾ.ಮುರಗೇಶ ಕೆ.ಎಮ್. ವಂದಿಸಿದರು.
ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

