ಉದಯರಶ್ಮಿ ದಿನಪತ್ರಿಕೆ
ಚಡಚಣ: ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ಭಗತ್ ಸಿಂಗ್ ರವರ ಜಯಂತಿಯನ್ನು ಆಚರಿಸಲಾಯಿತು.
ಬಿಜೆಪಿ ಪಕ್ಷದ ಯುವನಾಯಕ ಸುನೀಲ ಬಗಲಿ ಮಾತನಾಡಿ, ಬ್ರಿಟಿಷರ ಕಪಿಮುಷ್ಟಿಯಿಂದ ದೇಶವನ್ನು ಮುಕ್ತಗೊಳಿಸಲು ಕ್ರಾಂತಿಕಾರಿ ಮಾರ್ಗ ಅನುಸರಿಸಿದ್ದ ಸಿಂಗ್ ಯುವ ಜನತೆಗೆ ಇಂದಿಗೂ ಕೂಡ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.
ಕೆಡಿಪಿ ಸದಸ್ಯ ಶಿವಾನಂದ ಪಾಂಡ್ರೆ ಮಾತನಾಡಿ, ಭಗತ್ ಸಿಂಗ್ ಅವರ ಹೆಸರು ಶೌರ್ಯ ಮತ್ತು ತ್ಯಾಗದ ಪ್ರತೀಕವಾಗಿದೆ ಇವರ ಧೈರ್ಯ ಇಂದಿಗೂ ಲಕ್ಷಾಂತರ ಜನರನ್ನು ಆಕರ್ಷಿಸುತ್ತಿದೆ. ಯುವಜನತೆಯ ಮನಸ್ಸಿನಲ್ಲಿ ಇಂದಿಗೂ ಅವರೊಬ್ಬ ಧೀಮಂತ ನಾಯಕ. ಶಿರಡೋಣದ ಗ್ರಾಮದ ಯುವಕರು ಭಗತ್ ಸಿಂಗ್ ರವರ ಆಚಾರ ಮತ್ತು ವಿಚಾರಗಳನ್ನು ರೂಢಿಸಿಕೊಳ್ಳಬೇಕು. ಅವರನ್ನು ನಮ್ಮ ಜೀವನದಲ್ಲಿ ಪ್ರೇರಣೆಯಾಗಿ ನಾವೆಲ್ಲರೂ ತೆಗೆದುಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಅಮಸಿದ್ದ ಪೂಜಾರಿ, ರಮಾನಂದ ಕುಲಕರ್ಣಿ, ಪ್ರವೀಣ ಕಾಟೆ, ಸರ್ವೇಶ ಹಿರೇಮಠ, ಊರಿನ ಪ್ರಮುಖರಿದ್ದರು.

