ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಕರೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಬೆಂಗಳೂರಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಒಕ್ಕಲಿಗರ ಸಂಘ ಹಾಗೂ ಬ್ರಾಹ್ಮಣ ಮಹಾಸಭಾಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಾಜಕೀಯ ಪ್ರೇರಿತ ಜಾತಿಗಣತಿ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿ ಮಹತ್ವದ ಮಧ್ಯಂತರ ಸೂಚನೆ ನೀಡಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತರು ಇದನ್ನು ಬಹಿಷ್ಕರಿಸಬೇಕು. ಇಡೀ ಜಾತಿಗಣತಿ ಸಂಪೂರ್ಣವಾಗಿ ಐಚ್ಚಿಕ, ಗಣತಿದಾರರು ಯಾರನ್ನು ಮಾಹಿತಿ ನೀಡುವಂತೆ ಒತ್ತಾಯಿಸುವಂತಿಲ್ಲ. ಮತ್ತು ಸಾರ್ವಜನಿಕರ ಖಾಸಗಿತನ ಮತ್ತು ವ್ಯಕ್ತಿಯ ಸ್ವಾತಂತ್ರö್ಯ ಎತ್ತಿ ಹಿಡಿದಿರುವುದರಿಂದ ಸಾಮಾಜಿಕ ಸಮೀಕ್ಷೆ ಬಹಿಷ್ಕರಿಸಬೇಕು. ಈ ಕರೆಗೆ ಶ್ರೀ ಜಗದ್ಗುರು ಪಂಚಪೀಠಾಧೀಶ್ವರು, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದರು.
ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ಅಶೋಕ ವಾರದ ಇದ್ದರು.

