ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದಿಂದ ತಕ್ಷಣ ಸರ್ಕಾರ ದಲ್ಲಿ ಖಾಲಿಯಿರುವ ಉದ್ಯೋಗಗಳನ್ನ ಭರ್ತಿ ಮಾಡಬೇಕು, ಉದ್ಯೋಗದ ವಯೋಮಿತಿಯನ್ನ ಜಾಸ್ತಿ ಮಾಡಬೇಕೆಂದು ಆಗ್ರಹಿಸಿ ಮಂಗಳವಾರ ಬ್ರಹತ್ ಜನಾಕ್ರೋಶ ಹೋರಾಟ ಹಮ್ಮಿಕೊಳ್ಳಲಾಯಿತು.
ಈ ವೇಳೆ ಡಿ ವಿ ಪಿ ಸಂಘಟನೆಯ ರಾಜ್ಯಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, ನಾಡಿನಾದ್ಯಂತ ವಿದ್ಯಾರ್ಥಿ ಯುವಜನರ ನಿರುದ್ಯೋಗದ ಸಮಸ್ಯೆ ತೀವ್ರವಾಗಿದೆ. ನಾಲ್ಕು ವರ್ಷದಿಂದ ಯಾವುದೇ ಸರ್ಕಾರಿ ಹುದ್ದೆಗಳನ್ನು ತುಂಬದೇ ಸತಾಯಿಸುತ್ತಿರುವುದು ಖಂಡನಿಯ. ವಿದ್ಯಾರ್ಥಿ ಯುವ ಜನರು ನೌಕ್ರಿ ಪಡೆಯಬೇಕೆನ್ನುವ ಉದ್ದೇಶದಿಂದ ಹಗಲು ರಾತ್ರಿ ಕಷ್ಟಪಟ್ಟು ಶ್ರಮ ಪಡ್ತಾ ಇದ್ದಾರೆ ಆದರೆ ಸರ್ಕಾರ ಅವರ ಕಷ್ಟಕ್ಕೆ ಪ್ರತಿಫಲವಾಗಿ ಉದ್ಯೋಗ ನೀಡದೆ ಅವರ ಜೀವನವನ್ನು ಹಾಳು ಮಾಡುತ್ತಿರುವುದು ಅತಿ ಖೇದಕರ ಸಂಗತಿ ಎಂದರು.
ಡಿವಿಪಿ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್ ಅಜಮನಿ ಮಾತನಾಡಿ, ದಲಿತ ವಿದ್ಯಾರ್ಥಿ ಪರಿಷತ್ ಸುಮಾರು ನಿರುದ್ಯೋಗಿ ಯುವಕರ ಪರವಾಗಿ ಎರಡು ವರ್ಷದಿಂದ ಹೋರಾಟ ಮಾಡುತ್ತಾ ಬಂದಿದೆ. ಆದರೆ ನಮ್ಮನ್ನಾಳುವ ಸರ್ಕಾರಗಳು ನಮ್ಮ ಕಷ್ಟಗಳನ್ನ ಅರ್ಥಮಾಡಿಕೊಳ್ಳದೆ ಇವತ್ತು ಬೀದಿಯಲ್ಲಿ ನಿಲ್ಲಿಸುವ ರೀತಿಯಲ್ಲಿ ನಮ್ಮನ್ನ ನೋಡಿಕೊಳ್ಳುತ್ತಿದ್ದಾರೆ. ನಾವು ಇಡೀ ರಾಜ್ಯಾದ್ಯಂತ ಉದ್ಯೋಗ ಆಕಾಂಕ್ಷೆ ಯುವಕರ ಪರವಾಗಿ ಧ್ವನಿ ಎತ್ತಿದ್ದೇವೆ ಅವರಿಗೆ ನ್ಯಾಯ ಸಿಗುವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.
ಸ್ಥಳಕ್ಕೆ ದೌಡಾಯಿಸಿದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣುರ ಮತ್ತು ಜಿಲ್ಲಾ ಪೋಲಿಸ ವರಿಷ್ಟಧಿಕಾರಿ ಲಕ್ಮಣ ನಿಂಬರಗಿ ಮನವಿಯನ್ನು ಸ್ವೀಕರಿಸಿ, ವಿದ್ಯಾರ್ಥಿಗಳ ಮನವೊಲಿಸಿ ವಾತಾವರಣವನ್ನು ತಿಳಿಗೊಳಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ಮುಖಂಡರಾದ ಹುಚ್ಚಪ್ಪ ಸಿಂದಗಿ, ಮಂಜುನಾಥ್, ವಿದ್ಯಾರ್ಥಿ ಪರಿಷತ್ ಉಪಾಧ್ಯಕ್ಷರಾದ ಮಾದೇಶ್ ಚಲವಾದಿ, ಪ್ರತಾಪ್ ತೋಳನೂರ, ಪ್ರಶಾಂತ ದಾಂಡೇಕರ್, ರಾಹುಲ್ ಕಳಸದ, ಯಮನೂರಿ ಮಾದರ್, ಭೀಮು, ಮಂಜುನಾಥ್ ಎಲ್ ಬಾ, ಶಿಲ್ಪಾ, ಮುಂತಾದವರು ಭಾಗಿಯಾಗಿದ್ದರು.

