ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: “ಜೀವನದಲ್ಲಿ ಯಶಸ್ಸು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಸ್ಪಷ್ಟವಾದ ಗುರಿ ಮತ್ತು ಉದ್ದೇಶ ಅಗತ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಕೇವಲ ಅಂಕಗಳಿಗೆ ಸೀಮಿತಗೊಳಿಸದೆ, ಸಮಾಜಕ್ಕೆ ಕೊಡುಗೆ ನೀಡುವ ರೀತಿಯಲ್ಲಿ ಜ್ಞಾನವನ್ನು ಬಳಸಿಕೊಳ್ಳಬೇಕು” ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯವು ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ಇತ್ತೀಚಿಗೆ ಆಯೋಜಿಸಿದ್ದ ‘ಸೈಕಾಲಾಜಿಕಲ್ ಕೌನ್ಸಿಲಿಂಗ್ ಫಾರ್ ಕರಿಯರ್ ಗೈಡನ್ಸ್’ ಎಂಬ ವಿಷಯದ ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಗುರಿ-ಉದ್ದೇಶಗಳನ್ನು ಈಡೇರಿಸಿಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ನಗರದ ಆಲ್‌ಅಮೀನ್ ವೈದ್ಯಕೀಯ ಕಾಲೇಜಿನ ಶಸ್ತçಚಿಕಿತ್ಸೆಯ ಸಹಾಯಕ ಪ್ರಾಧ್ಯಾಪಕ ಡಾ. ಹಿತೇಂದ್ರ ನಾಯಕ “ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಬೇಕು. ಮಾನಸಿಕ ದೃಢತೆ (ಮೆಂಟಲ್ ಫಿಟ್‌ನೆಸ್) ಇದ್ದರೆ ಮಾತ್ರ ಜೀವನದಲ್ಲಿ ತಾವು ಕನಸಿನಲ್ಲಿ ಕಂಡ ಸಾಧನೆಗಳನ್ನು ನಿಜಗೊಳಿಸಲು ಸಾಧ್ಯವಾಗುತ್ತದೆ” ಎಂದರು.
ಕಾರ್ಯಾಗಾರದಲ್ಲಿ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಡಾ.ಜ್ಯೋತಿ ಉಪಾಧ್ಯ ಸ್ವಾಗತಿಸಿದರು. ಡಾ ಸುರೇಖಾ ರಾಠೋಡ ಅತಿಥಿಯರನ್ನು ಪರಿಚಯಿಸಿದರು. ಜ್ಯೋತಿ ಶಟ್ಯನ್ನವರ ನಿರೂಪಿಸಿದರು. ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ಡಾ.ತಹಮಿನಾ ಕೋಲಾರ ವಂದಿಸಿದರು,

