ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಪ್ರತಿಪಾದಿಸಿದ ಅಹಿಂಸಾ ತತ್ವದಿಂದ ಇಂದಿನ ಯುವಜನಾಂಗ ವಿಮುಖವಾಗುತ್ತಿರುವುದು ವಿಷಾದನೀಯ ಸಂಗತಿ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ ಹಾಗೂ ಗಾಂಧಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ ಶಾಸ್ತಿçಯವರ ಜನ್ಮದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಅಡಿಪಾಯ ಹಾಕಿದ ಗಾಂಧೀಜಿ ಅವರು ಆ ಮೂಲಕ ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ರೂಪಿಸಿದರು. ಇವತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮಗಳ ಅಭಿವೃದ್ಧಿಗೆ ಗಾಂಧೀಜಿ ಅವರು ಹಾಕಿಕೊಟ್ಟ ಗ್ರಾಮ ಸ್ವರಾಜ್ಯ ಕಲ್ಪನೆಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿವೆ ಎಂದು ಹೇಳಿದರು.
ಅದೇ ರೀತಿಯಾಗಿ ಲಾಲ್ ಬಹಾದ್ದೂರ ಶಾಸ್ತ್ರೀಜಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಒಬ್ಬ ಧೀಮಂತ ವ್ಯಕ್ತಿ. ಅವರು ತಮ್ಮ ಬಾಲ್ಯದಲ್ಲಿ ಅನೇಕ ಕಷ್ಟಗಳು ಇದ್ದರೂ ಶಿಕ್ಷಣ ಪಡೆದುಕೊಂಡು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿದವರು. ದೇಶ ಕಂಡ ಅಪ್ರತಿಮ ಆಡಳಿತಗಾರ ಎಂದು ಬಣ್ಣಿಸಿದರು.
ಹಿರಿಯ ಪ್ರಾಧ್ಯಾಪಕ ಪ್ರೊ.ಪಿ.ಜಿ.ತಡಸದ, ಅವರು ಮಾತನಾಡಿ, ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್‌ಶಾಸ್ತ್ರೀ ಅವರ ಜೀವನ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳ ಪಾಲನೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದರು.
ಮಹಾತ್ಮಾಗಾಂಧೀಜಿ ಜನ್ಮದಿನಾಚರಣೆ ಸಮಿತಿ ಅಧ್ಯಕ್ಷ ಪ್ರೊ.ಮಹೇಶ ಚಿಂತಾಮಣಿ ಅವರು, ಗಾಂಧಿಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅವರು ಮುಂಚೂಣಿಯಲ್ಲಿದ್ದರು. ಲಕ್ಷಾಂತರ ಜನ ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ನಮಗೆ ದೊರೆತಿರುವ ಸ್ವಾತಂತ್ರö್ಯವನ್ನು ನಾವೆಲ್ಲಾ ಕಾಪಾಡಿಕೊಂಡು ಹೋಗಬೇಕಿದೆ ಎಂದರು.
ಸಿAಧನೂರು ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಪ್ರೊ.ಪಿ.ಕಣ್ಣನ್, ಮಾತನಾಡಿ, ದೇಶದ ಸಾತಂತ್ರö್ಯ ಸಂಗ್ರಾಮದಲ್ಲಿ ಗಾಂಧೀಜಿವರು ಪಾತ್ರ ಎಷ್ಟು ಮುಖ್ಯವೆಂದು ಹೇಳಿದರು.
ಗಾಂಧೀಜಿಯವರು ದಕ್ಷಿಣ ಆಫ್ರಿಕಾಕ್ಕೆ ಹೋದಾಗ ಅವರಿಗೆ ಆದಂತಹ ಕರಿಯರು ಬಿಳಿಯರು ಭೇದ ತಾರತಮ್ಯದ ಕಹಿ ಅನುಭವಗಳು ಅವರಿಗೆ ಸತ್ಯ ಮತ್ತು ಅಹಿಂಸೆ ಬಗ್ಗೆ ಪಾಠಗಳನ್ನು ಕಲಿಸಿಕೊಟ್ಟವು. ಆದ್ದರಿಂದಲೆ ಅವರಿಗೆ ಭಾರತ ದೇಶದಲ್ಲಿ ಆಳುತಿದ್ದ ಬ್ರಿಟಿಷರ ವಿರುದ್ದ ಹೋರಾಡುವ ಕಿಚ್ಚು ಹೊತ್ತ್ತಿಕೊಂಡಿತು ಎಂದು ವಿವರಿಸಿದರು.
ಕುಲಸಚಿವ (ಮೌಲ್ಯಮಾಪನ) ಪ್ರೊ. ಬಸವರಾಜ ಲಕ್ಕಣ್ಣವರ, ಪ್ರಾಧ್ಯಾಪಕರಾದ ಪ್ರೊ. ಓಂಕಾರ ಕಾಕಡೆ, ಪ್ರೊ.ಡಿ.ಎಮ್.ಮದರಿ, ಪ್ರೊ.ಜ್ಯೋತಿ ಉಪಾಧ್ಯಾಯ, ಪ್ರೊ.ಹಣಮಂತಯ್ಯ ಪೂಜಾರಿ, ಪ್ರೊ.ರಾಜಕುಮಾರ ಮಾಲಿಪಾಟೀಲ್, ಡಾ.ಸಂಜೀವ ಗಿರಿ, ಡಾ.ಕಲಾವತಿ ಎಚ್. ಕಾಂಬಳೆ, ಡಾ.ಜಾಯ್ ಹೊಸಕೇರಿ ಡಾ.ಪ್ರಕಾಶ ಸಣ್ಣಕ್ಕನವರ, ಹಾಗೂ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಅಮರನಾಥ ಪ್ರಜಾಪತಿ ಸ್ವಾಗತಿಸಿ- ವಂದಿಸಿದರು.

