ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ ಬಹಾದ್ದೂರ್ ಶಾಸ್ತ್ರೀ ಅವರ ಜಯಂತಿಯಂಗವಾಗಿ ಗುರುವಾರ ಬಸವನಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೊಲೀಸ್ ಠಾಣೆ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಮೂರ್ತಿಗೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ ಅವರು ಮಾಲಾರ್ಪಣೆ ಮಾಡಿ, ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ನಗರ ಘಟಕ ಅಧ್ಯಕ್ಷ ಸುರೇಶಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಮುಖಂಡರಾದ ಎಂ.ಜಿ.ಆದಿಗೊಂಡ, ಸಂಕನಗೌಡ ಪಾಟೀಲ, ಮುತ್ತು ಗುಂಡಳ್ಳಿ, ಸಂಗಮೇಶ ಓಲೇಕಾರ, ಅಜೀಜ್ ಬಾಗವಾನ, ಪರಶುರಾಮ ಜಮಖಂಡಿ ಇತರರಿದ್ದರು.

