ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಕಲಕೇರಿ ರಸ್ತೆಯಲ್ಲಿರುವ ಎಲೈಟ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶಾಸಕ ಅಶೋಕ ಮನಗೂಳಿ ಅವರ ಅಧ್ಯಕ್ಷತೆ ಹಾಗೂ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರ ಉಪಸ್ಥಿತಿಯಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಪೂರ್ವಭಾವಿ ಸಭೆಯನ್ನು ಅ.೪ರಂದು ಬೆಳಗ್ಗೆ ೧೦ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ ಖಾಸಗಿ ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಚಾರ್ಯರು ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಶಾಂತೇಶ ದುರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
