ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ದೇಶದ ಸ್ವಾತಂತ್ರ‍್ಯಕ್ಕಾಗಿ ಅನೇಕ ಚಳುವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ‍್ಯ ಚಳುವಳಿಯನ್ನು ಮುನ್ನಡೆಸಿದ ಮಹಾತ್ಮ ಗಾಂಧಿಯವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ ಎಂದು ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಹೇಳಿದರು.
ಸಿಂದಗಿ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಗುರುವಾರದಂದು ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಗಾಂಧೀಜಿ ಅವರ ಸತ್ಯ, ಸಮಾನತೆ, ಅಹಿಂಸೆ, ಶಾಂತಿಯ ಬಹುದೊಡ್ಡ ಪ್ರತಿಪಾದಕರಾಗಿದ್ದಾರೆ. ಇಂದು ವಿಶ್ವದಾದ್ಯಂತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಪಂಡಿತ ಯಂಪುರೆ, ಶಾಂತು ರಾಣಾಗೋಳ, ಅಂಬರೀಷ ಚೌಕಲೆ ಸೇರಿದಂತೆ ಅನೇಕರು ಇದ್ದರು.
ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರ:
ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ಆವರಣೆ ಮಾಡಲಾಯಿತು.
ಈ ವೇಳೆ ರಶ್ಮಿ ನೂಲಾನವರ, ವಿದ್ಯಾ ದೇಸಾಯಿ ಇದ್ದರು.
ಪ್ರೇರಣಾ ಶಾಲೆ:
ಪಟ್ಟಣದ ನಾಗೂರ ಬಡಾವಣೆ ಹಾಗೂ ರಾಂಪೂರ ರಸ್ತೆಯಲ್ಲಿರುವ ಶ್ರೀ ಸಮರ್ಥ ವಿದ್ಯಾವಿಕಾಸ ವಿವಿದೊದ್ದೇಶಗಳ ಸಂಸ್ಥೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಹಾಗೂ ಪ್ರೇರಣಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ, ನಿರ್ದೇಶಕ ಪಿ.ಡಿ.ಕುಲಕರ್ಣಿ, ಮುಖ್ಯಗುರಮಾತೆ ಎಮ್.ಪಿ.ಬುಕ್ಕಾ, ಎಸ್.ಆಯ್.ಅಸ್ಕಿ ಸೇರಿದಂತೆ ಶಾಲೆಯ ಶಿಕ್ಷಕರು ಇದ್ದರು.
ಶ್ರೀ ಪದ್ಮರಾಜ ಮಹಿಳಾ ಕಾಲೇಜು: ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಇದೇ ವೇಳೆ ಪ್ರಾಚಾರ್ಯ ಎಸ್.ಎಂ.ಪೂಜಾರಿ, ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಎಸ್.ಸಿ.ದುದ್ದಗಿ, ಹೇಮಾ ಹಿರೇಮಠ, ವಿಜಯಲಕ್ಷ್ಮಿ ಭಜಂತ್ರಿ, ಮಮತಾ ಹರನಾಳ, ಬಸವರಾಜ, ಶಂಕರ ಕುಂಬಾರ ಸೇರಿದಂತೆ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.

