Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ಸಬಲೀಕರಣಕ್ಕೆ ಉದ್ಯಮಶೀಲತಾ ಯೋಜನೆಗಳು ನೆರವು
(ರಾಜ್ಯ ) ಜಿಲ್ಲೆ

ಮಹಿಳಾ ಸಬಲೀಕರಣಕ್ಕೆ ಉದ್ಯಮಶೀಲತಾ ಯೋಜನೆಗಳು ನೆರವು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಿಳಾ ಸಬಲೀಕರಣಕ್ಕೆ ಉದ್ಯಮಶೀಲತಾ ಯೋಜನೆಗಳು ನೆರವು ನೀಡುತ್ತವೆ. ಅಲ್ಲದೇ ಮಹಿಳೆಯರು ಸ್ವಯಂ ಉದ್ಯೋಗ ಕೈಕೊಳ್ಳಲು ಅವಕಾಶ ಕಲ್ಪಿಸುತ್ತವೆ ಎಂದು ಮುಕುಂದ ಝಳಕಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗದ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ‘ಉದ್ಯಮಶೀಲತೆಯ ಮೂಲಕ ಮಹಿಳೆಯರ ಸಬಲೀಕರಣ ಮತ್ತು ಸ್ವಯಂ ಉದ್ಯೋಗ ಯೋಜನೆಗಳು’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರನ್ನು ಸಬಲೀಕರಣಗೊಳಿಸಲು ಉದ್ಯಮಶೀಲತಾ ಅಭಿವೃದ್ದಿ ಯೋಜನೆಗಳು ಸಹಾಯಕವಾಗಿವೆ. ಸರ್ಕಾರ ಹಣಕಾಸಿನ ನೆರವು, ಕೌಶಲ್ಯ ತರಬೇತಿ ಹಾಗೂ ವ್ಯವಹಾರ ಪ್ರಾರಂಭಿಸಲು ಅಗತ್ಯವಾದ ಅವಕಾಶಗಳನ್ನು ಒದಗಿಸುತ್ತದೆ. ಜೊತೆಗೆ ರೂಡಸೆಟ್ ಸಂಸ್ಥೆಯು ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ, ಸಶಕ್ತರನ್ನಾಗಿ ಮಾಡಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಡಾ. ಮಲ್ಲಿಕಾರ್ಜುನ ಹತ್ತಿ ಮಾತನಾಡಿ, ಆರ್ಥಿಕ ಸ್ವಾತಂತ್ರ‍್ಯವನ್ನು ಗುರಿಯಾಗಿಟ್ಟುಕೊಂಡು ಮಹಿಳೆಯರಿಗೆ ಸ್ವ–ಉದ್ಯೋಗಕ್ಕಾಗಿ ಆರ್ಥಿಕ ಬೆಂಬಲ ಹಾಗೂ ತರಬೇತಿಯನ್ನು ನೀಡುವ ಹಲವು ಯೋಜನೆಗಳು ಸರ್ಕಾರದ ವತಿಯಿಂದ ಜಾರಿಗೆ ಬಂದಿವೆ. ಮಹಿಳೆಯರು ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ವೈ ತಮ್ಮಣ್ಣ ಮಾತನಾಡಿದರು.
ಈ ಕಾರ್ಯಾಗಾರದಲ್ಲಿ ಒಟ್ಟು ಮೂರು ವಿಚಾರಗೋಷ್ಠಿಗಳು ನಡೆದಿದ್ದು, ಗೋಷ್ಠಿಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮುಕುಂದ ಝಳಕಿ, ಪ್ರೊ.ಕಾಶೀಬಾಯಿ ಖ್ಯಾಡಗಿ ಮತ್ತು ಅಜಿತ ಗುಜ್ಜಾರ ಮಾತನಾಡಿದರು.
ಕಾರ್ಯಾಗಾರದಲ್ಲಿ ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ದಿವ್ಯಾ ಪೂಜಾರಿ ಪ್ರಾರ್ಥನಾ ಗೀತೆ ಹಾಡಿದರು. ಡಾ.ಅನಿತಾ ನಾಟಿಕಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಐ.ಕ್ಯೂ.ಎ.ಸಿ ಸಂಯೋಜಕಿ ಡಾ.ಭಕ್ತಿ ಮಹೀಂದ್ರಕರ ಸ್ವಾಗತಿಸಿ ಪರಿಚಯಿಸಿದರು. ಪ್ರೊ. ರಶ್ಮೀ ದಾಸ್ಯಾಳ ಕಾರ್ಯಕ್ರಮ ನಿರೂಪಿಸಿದರು. ಎಂ.ಕಾಂ ವಿಭಾಗದ ಸಂಯೋಜನಾಧಿಕಾರಿ ಪ್ರೊ. ದಾನಮ್ಮ ಗಿಡವೀರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ

ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ

ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ

ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ :ಶಾಸಕ ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ವೇದಾಸ್ ಮೆಡಿಕಲ್ ಕೇರ್ ತಂಡದಿಂದ ಮಕ್ಕಳಿಗೆ ಆರೋಗ್ಯ ಜಾಗೃತಿ
    In (ರಾಜ್ಯ ) ಜಿಲ್ಲೆ
  • ಅಥಣಿ ಸಮಗ್ರ ಅಭಿವೃದ್ಧಿಗೆ ಬದ್ಧ :ಸಚಿವ ಲಕ್ಷ್ಮಣ ಸವದಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಜ್ಞಾನಗಳ ಮೂಲ ಜಾನಪದ :ಶಿವಾನಂದ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ‘ಭಾರತ್ ಜೋಡೋ ಯುವ ಸಂಘ’ದ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ರಾಮತೀರ್ಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ದೇಶದ ಅಭಿವೃದ್ಧಿಗೆ ರಾಷ್ಟ್ರೀಯ ಏಕತೆ ಅತ್ಯಗತ್ಯ :ಡಾ.ನಾಯಕ
    In (ರಾಜ್ಯ ) ಜಿಲ್ಲೆ
  • ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ಕ್ರಮವಹಿಸಿ
    In (ರಾಜ್ಯ ) ಜಿಲ್ಲೆ
  • ಬಾವಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ! ತಂದೆ ನಾಪತ್ತೆ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.