ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳ ಸಹಯೋದಲ್ಲಿ ಅಕ್ಟೋಬರ್ ೦೪ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦:೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೌರವ ಉಪಸ್ಥಿತರಿರಲಿದ್ದು, ನಗರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
