ಇಂಡಿ: ಶಿಕ್ಷಕರು ಜ್ಞಾನದ ಸಾಗರವಿದ್ದಂತೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ. ಶಿಕ್ಷಕರಿಂದ ದೇಶದ ಪ್ರಗತಿ ಸಾಧ್ಯ. ಶಿಕ್ಷಕರು ತಮ್ಮ ಇಡೀ ಜೀವನವನ್ನು ಮಕ್ಕಳ ಅಭಿವೃದ್ಧಿಗೆ ಮುಡಿಪಾಗಿಡುತ್ತಾರೆ. ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಗುರುವಾರದಂದು ಜರುಗಿದ ವಿಶ್ವ ಶಿಕ್ಷಕರ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಟ್ಟು ಅವರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಈ ಸೇವೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೇ ಈ ದಿನದ ಆಚರಣೆಯ ಉದ್ದೇಶವಾಗಿದೆ ಎಂದು ಹೇಳಿದರು.
ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ, ವಿದ್ಯಾರ್ಥಿಗಳ ಜೀವನದ ಗುರಿ, ಉದ್ದೇಶಗಳನ್ನು, ಸಾಧಿಸುವ ಮಾರ್ಗಗಳನ್ನು ಶಿಕ್ಷಕರು ತಿಳಿಸಿಕೊಡುತ್ತಾರೆ. ಅಂಧಕಾರದ ಹಾದಿಯನ್ನು ಕಳೆದು ಜ್ಞಾನದ ಬೆಳಕನ್ನು ತುಂಬುವವವನೇ ಶಿಕ್ಷಕ ಎಂದರು.
ಶಿಕ್ಷಕರಾದ ಎಸ್ ಎಂ ಪಂಚಮುಖಿ, ಎಸ್ ಪಿ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Related Posts
Add A Comment