Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೭ ರಂದು ಉಚಿತ ಆರೋಗ್ಯ ತಪಾಸಣೆ & ಚಿಕಿತ್ಸೆ ಬೃಹತ್ ಶಿಬಿರ
(ರಾಜ್ಯ ) ಜಿಲ್ಲೆ

ಅ.೭ ರಂದು ಉಚಿತ ಆರೋಗ್ಯ ತಪಾಸಣೆ & ಚಿಕಿತ್ಸೆ ಬೃಹತ್ ಶಿಬಿರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ‌ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ‌ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ವರೆಗೆ ಈ‌ ಶಿಬಿರ ನಡೆಯಲಿವೆ.
ತಿಕೋಟಾದಲ್ಲಿ ಪ್ರಾಥಮಿಕ‌ ಆರೋಗ್ಯ ಕೇಂದ್ರ, ಬಬಲೇಶ್ವರದಲ್ಲಿ ಕಾಖಂಡಕಿ ರಸ್ತೆಯ ಶ್ರೀ ಶಾಂತವೀರ ಪ್ರೌಢಶಾಲೆ‌ ಆವರಣ, ದೇವರ ಗೆಣ್ಣೂರಿನ ನಮ್ಮೂರು ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಉಕ್ಕಲಿಯ ನ್ಯೂ ಇಂಗ್ಲಿಷ್ ಪ್ರೌಢ ಶಾಲೆಯಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗಿದೆ.
ಈ ಶಿಬಿರಗಳಲ್ಲಿ ವೈದ್ಯಕೀಯ ವಿಭಾಗ, ಶಸ್ತ್ರಚಿಕಿತ್ಸೆ, ಎಲುಬು ಮತ್ತು ಕೀಲು ಚಿಕಿತ್ಸೆ, ಕಿವಿ, ಮೂಗು ಹಾಗೂ ಗಂಟಲು, ಹೆರಿಗೆ ಮತ್ತು ಪ್ರಸೂತಿ, ಚಿಕ್ಕಮಕ್ಕಳ ಚಿಲಿತ್ಸೆ, ಚರ್ಮರೋಗ ಚಿಕಿತ್ಸೆ, ನೇತ್ರ ಚಿಕಿತ್ಸೆ, ಹೃದ್ರೋಗ ಚಿಕಿತ್ಸೆ ಹಾಗೂ ನರ ರೋಗ ಚಿಕಿತ್ಸೆ ವಿಭಾಗಗಳ ವೈದ್ಯರು ತಪಾಸಣೆ ನಡೆಸಲಿದ್ದಾರೆ.
ಶಿಬಿರಾರ್ಥಿಗಳಿಗಾಗಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆ ಅಥವಾ ಶಸ್ತ್ರಚಿಕಿತ್ಸೆ ಮಾಡಲು ಸಾಮಾನ್ಯ ವಾರ್ಡಿಗೆ ದಾಖಲಾತಿ, ವೈದ್ಯರು, ಶುಶ್ರೂಷಕರು ಮತ್ತು ಶಸ್ತ್ರಚಿಕಿತ್ಸೆ ಶುಲ್ಕ ಹಾಗೂ ಪ್ರಾಥಮಿಕ ತಪಾಸಣೆಗಳಾದ ಸಿಬಿಸಿ, ಯುರೀನ್ ರೊಟೀನ್, ಆರ್.ಬಿ.ಎಸ್, ಚೆಸ್ಟ್ ಎಕ್ಸ್-ರೆ ಮತ್ತು ಕ್ರಿಟಿನೈನ್ ಸೇವೆಗಳು‌ ಉಚಿತವಾಗಿವೆ. ವಿಶೇಷ ತಪಾಸಣೆ ಮತ್ತು ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು. ರೋಗಿಗಳು ಹೆಚ್ಚಿನ ಚಿಕಿತ್ಸೆಗೆ ಬರುವಾಗ ತಮ್ಮಲ್ಲಿರುವ ಬಿ.ಪಿ.ಎಲ್., ಅಂತ್ಯೋದಯ, ಯಶಸ್ವಿನಿ ಹಾಗೂ ಆಧಾರ ಕಾರ್ಡುಗಳನ್ನು ತರಬೇಕು. ಅಲ್ಲದೇ, ಚಿಕಿತ್ಸೆಗೆ ಬೇಕಾಗುವ ಔಷಧಿಗಳ ವೆಚ್ಚವನ್ನು ಶಿಬಿರಾರ್ಥಿಗಳೇ ಭರಿಸಬೇಕು.
ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಮೊಬೈಲ್ ಸಂಖ್ಯೆ 9591682224 ಮತ್ತು 8951178777 ಸಂಪರ್ಕಿಸಬಹುದು ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.