ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಕ್ಟೋಬರ್ ೬ ರಂದು ಕೊಪ್ಪಳದಲ್ಲಿ ಮುಖ್ಯಮಂತ್ರಿಗಳಿಂದ ಫಲಾನುಭವಿಗಳ ಸೌಲಭ್ಯ ವಿತರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತದ ಮನವಿ ಮೇರೆಗೆ, ವಿಜಯಪುರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗದಿಂದ ಎರಡು ನೂರು ಬಸ್ ಗಳನ್ನು ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಅ.೬ರಂದು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
