ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ. ಎಸ್. ಪಾಟೀಲ ಅವರು
ವಿಜಯಪುರ ಜಿಲ್ಲಾ ಸಹಕಾರ ಯುನಿಯನ್ ನಿಯಮಿತಕ್ಕೆ ಐದು ವರ್ಷಗಳ ಅವಧಿಗೆ ನಿರ್ದೇಶಕರಾಗಿ ಪಟ್ಟಣದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಗ್ ಅಧಿಕಾರಿ ಚೇತನ ಭಾವಿಕಟ್ಟಿ ತಿಳಿಸಿದ್ದಾರೆ. ಸದಸ್ಯತ್ವ ಹೊಂದಿದ ಜಿಲ್ಲೆಯ ಎಲ್ಲಾ ತಾಲೂಕುಗಳ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಗಳಿಂದ ಸದಸ್ಯರ ಆಯ್ಕೆ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ಇವರು ಪಟ್ಟಣದ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ಸತತವಾಗಿ ನಾಲ್ಕು ಬಾರಿ ನಿರ್ದೇಶಕರಾಗಿ ಆಯ್ಕೆಯಾಗಿ ಪ್ರಸ್ತುತ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
