ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಾಲ್ಮೀಕಿ ಸಮಾಜಕ್ಕೆ ಬಹುದೊಡ್ಡ ಸಾಂಸ್ಕೃತಿಕ ಪರಂಪರೆ ಇದ್ದು, ಇಡೀ ವಿಶ್ವಕ್ಕೆ ರಾಮಾಯಣದಂತಹ ಮಹಾಕಾವ್ಯ ಕೊಟ್ಟ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿ ಅವರ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಹೇಳಿದರು.
ಸಿಂದಗಿ ಪಟ್ಟಣದ ಆಡಳಿತ ಸೌಧದ ಆವರಣದಲ್ಲಿ ತಾಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜ ಅಕ್ಷರ ಸಂಸ್ಕೃತಿಯಿಂದ ದೂರ ಉಳಿದಿದೆ. ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಕಟ್ಟಿಕೊಡಬೇಕಾದ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಸರಕಾರದ ಸೌಲಭ್ಯಗಳನ್ನು ಎಲ್ಲರೂ ಕಡ್ಡಾಯವಾಗಿ ಬಳಸಿಕೊಳ್ಳಬೇಕು. ಅವರ ತತ್ವಾದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಸಿಂದಗಿ ಉಪವಿಭಾಗದ ಅಂಚೆ ಇಲಾಖೆಯ ನೀರಿಕ್ಷಕ ಮಹಾಂತೇಶ ತೊಗರಿ ವಿಶೇಷ ಉಪನ್ಯಾಸ ನೀಡಿದರು. ವಾಲ್ಮೀಕಿ ಸಮಾಜದ ಮಹಾ ಸಭಾ ಅಧ್ಯಕ್ಷ ಸಿದ್ದಲಿಂಗ ನಾಯ್ಕೋಡಿ, ನೌಕರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ ಮಾತನಾಡಿದರು. ಜ್ಞಾನ ಭಾರತಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆಯನ್ನು ಪ್ರಸ್ತುತ ಪಡಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ ಸ್ವಾಗತಿಸಿದರು. ಶಿಕ್ಷಕ ಎಂ.ಆರ್.ಡೋಣಿ ನಿರೂಪಿಸಿದರು. ಆರ್.ಎಸ್.ಬನ್ನೇಟ್ಟಿ ವಂದಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ, ಅರವಿಂದ ಡೋಣೂರ, ಚಂದ್ರಶೇಖರ ದೇವರೆಡ್ಡಿ, ಕಂದಾಯ ನೀರಿಕ್ಷಕ ಆಯ್.ಎ.ಮಕಾಂದಾರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ, ನಿಖಿಲ್‌ಅಹ್ಮದ ಖಾನಾಪುರ, ಗಂಗಾಧರ ಸೋಮನಾಯಕ, ಸಂತೋಷ, ಕೆ.ಎಲ್.ಪೂಜಾರಿ, ಲಾಲಾಸಾಬ್ ಶೇಖ, ಮಹೇಶ ಮಾದರ, ಅಜರುದ್ದಿನ ಮುಲ್ಲಾ, ಮಂಜುಳಾ, ಪ್ರಜ್ವಲ ದೊಡಮನಿ, ಅಪೂರ್ವ ಹೊಸಮನಿ, ಆಂಜನೇಯ ಕನ್ನೊಳ್ಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮಾಜ ಬಾಂಧವರು ಇದ್ದರು.

