ಕಲಕೇರಿ: ಮಕ್ಕಳ ಉತ್ತಮ ಬೆಳವಣಿಗೆಗಾಗಿ ಗರ್ಭಿಣಿಯರು ಹಾಗೂ ಬಾಣಂತಿಯರು ಪೋಷಕತ್ವವುಳ್ಳ ಪೌಷ್ಠಿಕ ಆಹಾರ ಸೇವನೆ, ಅಗತ್ಯ ಪ್ರಮಾಣದ ನಿದ್ದೆ, ನೀರು, ಸೇವನೆ ಮಾಡಬೇಕು ಎಂದು ಸಹಾಯಕ ಸಿಡಿಪಿಓ ಎಸ್ ಎನ್ ಕೋರವಾರ ಹೇಳಿದರು.
ಕಲಕೇರಿ ಗ್ರಾಮದ ೯ ಅಂಗನವಾಡಿ ಕೇಂದ್ರಗಳಲ್ಲಿ ಹಮ್ಮಿಕೊಂಡ ಸಂಕಲ್ಪ ಸಪ್ತಾಹ, ಸುಪೋಷಿತ ಪರಿವಾರ ಪೋಷಣಾ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗರ್ಭಿಣಿ ತಾಯಂದಿರು ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಲಾಭ ಪಡೆದುಕೊಂಡು ಆರೋಗ್ಯಪೂರ್ಣ ಸ್ವಸ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅವರು ಹೇಳಿದರು.
ಈ ವೇಳೆ ಕಲಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲ ೯ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪೌಷ್ಠಿಕ ಆಹಾರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ನ ಸದಸ್ಯರು, ನೊಡಲ್ ಅಧಿಕಾರಿ ಸಿದ್ರಾಮಪ್ಪ ಬಳ್ಳುರಗಿ, ಅಂಗನವಾಡಿ ಮೇಲ್ವಿಚಾರಕಿ ಎ ಎಂ ಸಜ್ಜನ್, ಗ್ರಾಮ ಪಂಚಾಯತ್ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
Related Posts
Add A Comment