Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ

ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ

ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೊರ್ತಿ ಕೆರೆ-ತಡವಲಗಾ ಕ್ಯಾನಲ್‌ಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ
(ರಾಜ್ಯ ) ಜಿಲ್ಲೆ

ಹೊರ್ತಿ ಕೆರೆ-ತಡವಲಗಾ ಕ್ಯಾನಲ್‌ಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆ ಹಾಗೂ ತಡವಲಗಾ ಕ್ಯಾನಲ್‌ಗೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊರ್ತಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕೆರೆ ಭರ್ತಿಯಾಗಿ ಏರಿ ಕುಸಿತ ಕಂಡ ಹಿನ್ನಲೆಯಲ್ಲಿ ರೈತರ ಹೊಲಗಳಿಗೆ ನೀರು ಹರಿದು ಬೆಳೆ ಹಾನಿ ಸೇರಿದಂತೆ ಹಾನಿಗೊಳಗಾದ ಪ್ರದೇಶವನ್ನು ಸಮೀಕ್ಷೆ ನಡೆಸಿ ವಿಪತ್ತು ಪರಿಹಾರ ನಿಧಿಯಡಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಅಕ್ಟೋಬರ ೨ ರಂದು ಹೆಚ್ಚಿನ ಪ್ರಮಾಣದ ಏರಿಯ ಕುಸಿತ ಕಂಡ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ ಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಕೆರೆಯ ಕೋಡಿಯಿಂದ ಸುಮಾರು ೩೦ ಮೀಟರ ದೂರದಲ್ಲಿ ಹಾಗೂ ಕುಸಿತ ಕಂಡುಬಂದ ಸ್ಥಳದಿಂದ ೫೦ ಮೀಟರ ಅಂತರದಲ್ಲಿ ಕ್ರಮೇಣವಾಗಿ ನೀರನ್ನು ಹೊರಗೆ ಹಾಕಲು ಕೃತಕವಾಗಿ ಕೆರೆಯ ಏರಿಯಲ್ಲಿ ಚಾನಲ್ ನಿರ್ಮಾಣ ಮಾಡಿ ಈಗಾಗಲೇ ಹಂತ ಹಂತವಾಗಿ ನೀರನ್ನು ಹೊರಹಾಕಲಾಗಿದ್ದು, ಕುಸಿತ ಕಂಡ ಹೊರ್ತಿ ಕೆರೆ ದುರಸ್ತಿಗೆ ಸಂಬಂಧಿಸಿದಂತೆ ಸೂಕ್ತ ಕ್ರೀಯಾಯೋಜನೆಯನ್ನು ಸಿದ್ಧಪಡಿಸಿಕೊಂಡು ದುರಸ್ತಿ ಕಾಮಗಾರಿ ಕೈಗೊಂಡು ಯಾವುದೇ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ನಂತರ ತಡವಲಗಾ ಕ್ಯಾನಲ್‌ಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತçದ, ಇಂಡಿ ತಹಶೀಲ್ದಾರ ವಿಜಯಕುಮಾರ ಕಡಕಭಾವಿ, ಇಂಡಿ ಉಪ ವಿಭಾಗದ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸಂದೀಪಕುಮಾರ, ಕೆಬಿಜೆಎನ್‌ಎಲ್ ಕಾರ್ಯನಿರ್ವಾಹಕ ಅಭಿಯಂತರ ಸೋನಾವಣೆ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ

ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ

ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ
    In (ರಾಜ್ಯ ) ಜಿಲ್ಲೆ
  • ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.