Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬರಪೀಡಿತ ವಿಜಯಪುರ ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸಿ
(ರಾಜ್ಯ ) ಜಿಲ್ಲೆ

ಬರಪೀಡಿತ ವಿಜಯಪುರ ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಚಿವ ಎಂ.ಬಿ.ಪಾಟೀಲ ಮನವಿ

ವಿಜಯಪುರ: ತೀವ್ರ ಬರ ಪೀಡಿತ ವಿಜಯಪುರ ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ.
ಸಚಿವರು ಸಧ್ಯಕ್ಕೆ ವಿದೇಶ ಪ್ರವಾಸದಲ್ಲಿದ್ದು, ಅವರ ಸೂಚನೆಯಂತೆ ಸಚಿವರ ಸಾರ್ವಜನಿಕ‌ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ, ಸಚಿವರ ಕಚೇರಿಯ ಅಧಿಕಾರಿಗಳಾದ ಎಂ. ಎನ್. ಚೋರಗಸ್ತಿ ಮತ್ತು ದಶರಥ ಭೋಸಲೆ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಚಿವರ ಪರವಾಗಿ ಅರ್ಜುಣಗಿ‌ ಗ್ರಾಮದಲ್ಲಿ ಮನವಿ ಪತ್ರ ಸಲ್ಲಿಸಿದರು.
ಮಳೆಯ ಕೊರತೆಯಿಂದಾಗಿ ತೀವ್ರ ಕೊಳವೆ ಬಾವಿ, ತೆರೆದ ಬಾವಿಗಳು ಬತ್ತಿ ಹೋಗಿವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಉಂಟಾಗಬಹುದಾಗಿದೆ. ಮಳೆಯ ಅಭಾವದಿಂದ ರೈತರು ಜಮೀನಿನಲ್ಲಿ ಹಾಕಿರುವ ದುಡಿಮೆ ಹಾಗೂ ಬಂಡವಾಳ ಸಹ ಕೈಗೆ ಬರದೇ ಇರುವ ಪರಿಸ್ಥಿತಿಯಲ್ಲಿ ರೈತ ತೀವ್ರ ಸಂಕಷ್ಟ ಸ್ಥಿತಿಯಲ್ಲಿದ್ದು, ಸರ್ಕಾರವು ರೈತರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ವ್ಯಾಪಾರಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ನೀಡಿರುವ ನೈಜ ವರದಿಯನ್ನಾಧರಿಸಿ ಸಮೀಕ್ಷೆಯಲ್ಲಿ ಕಂಡು ಬಂದಿರುವ ಅಂಶಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿ ಮಾಡಿ, ವಿಜಯಪುರ ಜಿಲ್ಲೆಯ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬರ ಪರಿಹಾರ ಅನುದಾನ ಒದಗಿಸಲು ಪ್ರಯತ್ನಿಸುವಂತೆ ಸಚಿವರು ಅವರು ಮನವಿ ಮಾಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ 10,53,471 ಹೆಕ್ಟೇರ್ ಪ್ರದೇಶವಿದ್ದು, ಇದರಲ್ಲಿ 9,72,318 ಹೆಕ್ಟೇರ್ ಪ್ರದೇಶ ಸಾಗುವಳಿ ಕ್ಷೇತ್ರವಾಗಿದೆ. ಇದರಲ್ಲಿ 6,49,940 ಹೆಕ್ಠೆರ್ ಪ್ರದೇಶ ಸಾಮಾನ್ಯ ಮುಂಗಾರಿನ ಕ್ಷೇತ್ರ, 3,45,922 ಹೆಕ್ಟೇರ್ ಸಾಮಾನ್ಯ ಹಿಂಗಾರಿನ ಕ್ಷೇತ್ರವಾಗಿದ್ದು, 3,09,811 ಹೆಕ್ಟೇರ್ ಪ್ರದೇಶ ಮಾತ್ರ ನೀರಾವರಿಗೊಳಪಟ್ಟಿದೆ. ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ಶೇ.60ರಷ್ಟು ಮಾತ್ರ ಬಿತ್ತನೆಯಾಗಿದೆ. ಬಿತ್ತನೆಯಾಗಿರುವ ಪ್ರದೇಶದಲ್ಲಿ ಮಳೆ ಹಾಗೂ ತೇವಾಂಶದ ಕೊರತೆಯಿಂದ ಬೆಳೆಗಳು ಒಣಗಿಹೋಗಿವೆ.
2023ರ ಮೇ ತಿಂಗಳಿನಿಂದ ಅಕ್ಟೋಬರ್ ಮೊದಲ ವಾರದವರೆಗೆ ಮಳೆಮಾಪನ ವರದಿ ಅವಲೋಕನ ಮಾಡಲಾಗಿ ಅತಿ ಕಡಿಮೆ ಮಳೆಯಾಗಿರುವುದು ದಾಖಲಾಗಿದೆ. 13 ತಾಲೂಕುಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ 12 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ದುರ್ದೈವಶಾತ ಕೇವಲ ಒಂದು ದಿನ ತಿಕೋಟಾ ಹೋಬಳಿಯಲ್ಲಿ ಹೆಚ್ಚಿನ ಮಳೆಯಾಗಿರುವುದರಿಂದ ಮಳೆಮಾಪನ ವರದಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ತೋರಿಸಿರುವ ಹಿನ್ನಲೆಯಲ್ಲಿ ತಿಕೋಟಾ ತಾಲೂಕನ್ನು ಬರಪೀಡಿತ ಎಂದು ಘೋಷಿಸುವುದನ್ನು ಕಲಾ ಬಿ. ವಾಸ್ತವದಲ್ಲಿ ತಿಕೋಟಾ ತಾಲೂಕಿನಲ್ಲಿಯೂ ಸಹ ಸಮಯಕ್ಕೆ ಸರಿಯಾಗಿ ಮಳೆಯಾಗದೇ ಇರುವುದರಿಂದ ಟ್ಯಾಂಕರ್ ಮೂಲಕ ನೀರು ಪಡೆದು ತಾಲೂಕಿನ ತೋಟಗಾರಿಕೆ ಬೆಳೆ ರಕ್ಷಿಸಲಾಗುತ್ತಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದೆ. ಮಳೆಯ ಕೊರತೆಯಿಂದ ಕೊಳವೆ ಬಾವಿ, ಅಂತರ್ಜಲ ಮಟ್ಟ ಕುಸಿದು, ತೀವ್ರ ಸಂಕಷ್ಟಕೊಳಗಾಗಿರುವುದರಿಂದ ತಿಕೋಟಾ ತಾಲೂಕನ್ನು ಸಹ ತೀವ್ರ ಬರಪೀಡಿತ ತಾಲೂಕು ಘೋಷಣೆಗೆ ಜಿಲ್ಲಾಧಿಕಾರಿಗಳು ಸರಕಾರಕ್ಕೆ ಪತ್ರ ಬರೆದು ವರದಿ ಸಲ್ಲಿಸಿದ್ದಾರೆ. ಅದರಂತೆ ನಾನೂ ಸಹ ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ಕಂದಾಯ ಸಚಿವರಿಗೆ ಪತ್ರ ಬರೆದು ತಿಕೋಟಾ ತಾಲೂಕನ್ನು ಬರಪೀಡಿತ ತಾಲೂಕವೆಂದು ಘೋಷಿಸಲು ಮನವಿ ಮಾಡಿಕೊಂಡಿದ್ದು, ವಾಸ್ತವಾಂಶದ ವರದಿಯನ್ನು ಪಡೆದುಕೊಂಡು ತಿಕೋಟಾ ತಾಲೂಕನ್ನು ಸಹ ಬರಪೀಡಿತ ತಾಲೂಕುವೆಂದು ಪರಿಗಣಿಸಿ ಬರಪೀಡಿತ ತಾಲೂಕು ಎಂದು ಘೋಷಿಸಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡಲು ವರದಿ ನೀಡುವಂತೆ ಸಚಿವ ಎಂ. ಬಿ. ಪಾಟೀಲ ಅವರು ಕೇಂದ್ರ ಬರ ಅಧ್ಯಯನ‌ ತಂಡಕ್ಕೆ ನೀಡಿರುವ ಮನವಿ ಪತ್ರದಲ್ಲಿ ಕೋರಿದ್ದಾರೆ.

BIJAPUR NEWS congress patil public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!

ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ

ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು

ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಎಸ್ಪಿ ಹೆಸರಲ್ಲಿ ಫೇಕ್ ಅಕೌಂಟ್ :ವಂಚಕ ಅರೆಸ್ಟ್!
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ದೀಪಕ್ ಶಿಂತ್ರೆ ಗೆ “ಪತ್ರಕರ್ತ ಭೂಷಣ” ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಪರಿಸರ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಇಂದು
    In (ರಾಜ್ಯ ) ಜಿಲ್ಲೆ
  • ಸಚಿವ ಎಂ.ಬಿ.ಪಾಟೀಲರಿಗೆ ಸನ್ಮಾನ ಸಮಾರಂಭ ನಾಳೆ
    In (ರಾಜ್ಯ ) ಜಿಲ್ಲೆ
  • ಜೂ.೮ರಂದು ನ್ಯಾಯಾಧೀಕರಣದ ತೀರ್ಪಿನ ಕುರಿತು ವಿಚಾರ ಸಂಕಿರಣ
    In (ರಾಜ್ಯ ) ಜಿಲ್ಲೆ
  • ಮೌಲಾನಾ ಆಜಾದ್ ಮಾದರಿ ಶಾಲೆಗಳ ಪ್ರವೇಶ ಪರೀಕ್ಷೆ: ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ
    In (ರಾಜ್ಯ ) ಜಿಲ್ಲೆ
  • ಅಂತಾರಾಷ್ಟ್ರೀಯ ಉತ್ಸವಕ್ಕೆ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಪ್ರಕ್ರಿಯೆ ಶೇ.೯೦ ರಷ್ಟು ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಸಿರಿಧಾನ್ಯ ಪೌಡರ್ ಮಹತ್ವ ತಿಳಿಸುವ ಕಾರ್ಯಕ್ರಮ :ನಾಗರಾಜ್
    In (ರಾಜ್ಯ ) ಜಿಲ್ಲೆ
  • ಜೂ.7ರಂದು ಶಿವಾಜಿ ಮಹಾರಾಜರ ಜಯಂತೋತ್ಸವ & ಜಿಲ್ಲಾ ಸಮಾವೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.