Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ

ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ

ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ಸಂಪನ್ನ
(ರಾಜ್ಯ ) ಜಿಲ್ಲೆ

ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ಸಂಪನ್ನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸತತ ನಾಲ್ಕು ದಿನಗಳಿಂದ ನಡೆದ ರಾವುತರಾಯ-ಮಲ್ಲಯ್ಯನ ಅದ್ಧೂರಿ ಜಾತ್ರೆೆ ನಾಡಿನ ಮೂಲೆಗಳಿಂದ ಬಂದ ಸಹಸ್ರಾರು ಭಕ್ತರ ಮದ್ಯೆ ಬುಧವಾರ ಸಂಪನ್ನಗೊಂಡಿತು.
ಪಟ್ಟಣದ ಹೊರವಲಯದ ಮಲ್ಲಯ್ಯನ ದೇವಸ್ಥಾನಕ್ಕೆ ಕಳೆದ ಶನಿವಾರದಂದು ತೆರಳಿದ್ದ ರಾವುತರಾಯನನ್ನು ತೆರೆದ ಬಂಡಿಯಲ್ಲಿ ಸಹಸ್ರಾರು ಭಕ್ತಾಧಿಗಳ ಜಯಘೋಷದ ಮದ್ಯೆ ಮೂಲ ದೇವಸ್ಥಾನಕ್ಕೆ ಕರೆ ತರಲಾಯಿತು. ನಾಡಿನ ಹಾಗು ಮಹಾರಾಷ್ಟ್ರ, ಆಂಧ್ರ, ಗೋವಾ ರಾಜ್ಯಗಳಿಂದ ಆಗಮಿಸಿದ ಭಕ್ತ ಸಮೂಹ ವಾಸ್ತವ್ಯ ಹೂಡಿ ವಿವಿಧ ಪೂಜಾ ಕಾರ‍್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾದರು.
ಬೆಳಿಗ್ಗೆ ೭.೦೦ ಗಂಟೆಗೆ ಪ್ರಾರಂಭವಾದ ಭವ್ಯ ಬಂಡಿ ಮೆರವಣಿಗೆಯಲ್ಲಿ ವಿರಾಜಮಾನನಾಗಿ ಕಂಗೊಳಿಸಿದ ರಾವುತರಾಯನನ್ನು ಭಕ್ತಾಧಿಗಳು ಏಳುಕೋಟಿ ಏಳುಕೋಟಿ ಏಳುಕೋಟಿ ಗೇ ಎಂಬ ಜಯಕಾರದೊಂದಿಗೆ ಭಕ್ತಿ ಸಮರ್ಪಿಸಿದರು.
ಜಾತ್ರೆಯಲ್ಲಿ ವಿಶೇಷವಾಗಿ ದಿವಟಿಗೆ ಹಿಡಿದವರು ಸಾಲಾಗಿ ಕುಳಿತು ಭಕ್ತಿಯ ಭಾವ ಮೆರೆದರೆ, ಪುರುಷ ವಗ್ಗೆಗಳು ಹೆಗಲ ಮೇಲೆ ಕಂಬಳಿ ಹೊತ್ತು, ಕೈಯಲ್ಲಿ ತ್ರಿಶೂಲ ಹಿಡಿದು ರಾವುತರಾಯನ ಬಂಡಿ ಮುಂದೆ ಕುಣಿಯುತ್ತ ಜನರ ಗಮನ ಸೆಳೆದರು.
ಪಟ್ಟಣದ ಜನರು ನಾಲ್ಕು ದಿನಗಳವರೆಗೆ ತಮ್ಮ ಕೆಲಸ ಕಾರ‍್ಯಗಳನ್ನು ಬದಿಗೊತ್ತಿ, ಪ್ರತಿದಿನ ಪೂಜಾಕಾರ್ಯ ಸಾಂಸ್ಕೃತಿಕ ಕರ‍್ಯಕ್ರಮದಲ್ಲಿ ಪಾಲ್ಗೊಂಡು ಜಾತ್ರೋತ್ಸವಕ್ಕೆ ಮೆರಗು ತಂದರು. ಜಾತ್ರೆಯ ಅಂಗವಾಗಿ ಭಾರ ಎತ್ತುವ ಸ್ಪರ್ಧೆಗಳು, ಅನ್ನಪ್ರಸಾದ ಪ್ರತಿವರ್ಷದಂತೆ ಕಂಡು ಬಂದವು.
ಪಾರಂಪರಿಕ ಪವಿತ್ರತೆಯ ಸಂಕೇತವಾಗಿ ಕೇವಲ ಹಣೆಗೆ ಹಚ್ಚುತ್ತಿದ್ದ ಭಂಡಾರ ವರ್ಷದಿಂದ ವರ್ಷಕ್ಕೆ ಎರಚುವ ಬಣ್ಣವಾಗಿ ಬೇಕಾಬಿಟ್ಟಿಯಾಗಿ ಬಳಕೆ ಮಾಡುತ್ತಿರುವುದು ಜಾತ್ರೆಯ ಘನತೆಗೆ ಕುಂದು ತರುವುದರ ಜೊತೆಗೆ ಇಡೀ ಪಟ್ಟಣದ ರಸ್ತೆಯೆಲ್ಲಾ ಹಳದಿಮಯವಾಗಿರುವುದು ಕಂಡು ಬಂತು. ಇನ್ನೂ ಜಾತ್ರೆಯುದ್ದಕ್ಕೂ ಜಾತ್ರಾ ಕಮೀಟಿ ಹಾಗೂ ಪೊಲೀಸ್ ಸಿಬ್ಬಂದಿ ಸೂಕ್ತ ಬಂದೋಬಸ್ತ ವಹಿಸಿದ್ದರಿಂದ ಯಾವುದೆ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೇ ಶಾಂತಿಯಿಂದ ಮುಕ್ತಾಯಗೊಂಡು ಜನಸಮೂಹದ ಪ್ರಶಂಸೆಗೆ ಪಾತ್ರವಾಯಿತು.

ಭವಿಷ್ಯದ ಕುರಿತಾದ ಕಾರಣಿಕ ನುಡಿಗಳು

ರಾವುತರಾಯ ಪ್ರತಿವರ್ಷ ಮಲ್ಲಯ್ಯ ದೇವಸ್ಥಾನಕ್ಕೆ ತೆರಳುವಾಗ ಹಾಗೂ ಬರುವಾಗ ಕಾರಣಿಕರು ಭವಿಷ್ಯದ ಕುರಿತು ಹೇಳಿಕೆಗಳನ್ನು ಹೇಳುವ ವಾಡಿಕೆಯಿದ್ದು, ಈ ಬಾರಿ ಅವರು ಹೇಳಿದಂತೆ, ಚಿತ್ತಿ,ಸ್ವಾತಿ, ಈಸಾಕಿ ಮಳೆ ಒಂದು ಸಲ ಕೊಡತೀನಿ. ಬಿಳಿ ಕಾಳ ಕಟ್ಟಿ ಒಕ್ಕಳ ಆಯಿತು. ಗೋಧಿ, ಅಗಸಿ, ಕುಸುಬಿ, ಕಡಲೆ ಜೋಳದ ಬೆನ್ನು ಹತ್ತಿದವು. ಕಾಲಮಾನ ಬಹಳ ಕಷ್ಟಬಂತು. ಜನರಿಗೆ ಎಷ್ಟು ಹೇಳಿದರೂ ತಿಳಿಯುತ್ತಿಲ್ಲ. ಕರ್ಮ, ಧರ್ಮಗಳಲ್ಲಿ ಧರ್ಮ ಕಡಿಮೆಯಾಗಿ ಕರ್ಮದ ತೂಕವೇ ಹೆಚ್ಚಾಗುತ್ತಿದೆ. ಚಟ್ಟಿ ಜಾತ್ರೆಗೆ ನನ್ನ ಕುದರಿ ತಗೊಂಡು ಕುಣಕೋತ ಬರತೀನಿ, ನನ್ನ ಕುದರಿಗಿ ಯಾರು ಕೈ ಹಚ್ಚಬ್ಯಾಡ್ರಿ. ನನ್ನ ಸಿಂಹಾಸನ ಎಲ್ಲರೂ ಮುಟ್ಟಬ್ಯಾಡ್ರಿ ಬಾಳ ಜೋಕಿ. ಎಂಬ ಭವಿಷ್ಯದ ಕುರಿತು ಹೇಳಿಕೆಗಳಾದವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ

ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ

ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ

ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಷ್ಟ್ರೀಯ ಲೋಕ್ ಅದಾಲತ್ :೮೩೯ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಬಂಗಾರದಂತ ಭೂಮಿ ಮಾರಾಟ ಮಾಡಬೇಡಿ
    In (ರಾಜ್ಯ ) ಜಿಲ್ಲೆ
  • ಸರಕಾರದಿಂದ ನಿರಾಶ್ರೀತರ ಕಣ್ಣೀರು ಒರೆಸುವ ಕಾರ್ಯ
    In (ರಾಜ್ಯ ) ಜಿಲ್ಲೆ
  • ಜಿಲ್ಲಾ ಕಸಾಪ ದತ್ತಿ ಪ್ರಶಸ್ತಿಗೆ ಆಯ್ಕೆ :ಇಂದು ಪ್ರದಾನ
    In (ರಾಜ್ಯ ) ಜಿಲ್ಲೆ
  • ಮಾ.೨೨ ರಂದು ಸಂವಿಧಾನ ಜಾಗೃತಿ ಸಮಾವೇಶ :ಮಯೂರ
    In (ರಾಜ್ಯ ) ಜಿಲ್ಲೆ
  • ಅವಕಾಶ ವಂಚಿತ ಮಹಿಳೆಯರಿಗೆ ಅವಕಾಶ ನೀಡಿ :ಉಜ್ವಲಾ
    In (ರಾಜ್ಯ ) ಜಿಲ್ಲೆ
  • ಅಂಬರ ಚುಂಬಿತ ಪ್ರೇಮ ಪ್ರೇಮ
    In ವಿಶೇಷ ಲೇಖನ
  • ಅಗ್ನಿ ಅವಘಡ: ರೂ.50 ಲಕ್ಷ ಮೌಲ್ಯದ ವಸ್ತುಗಳು ಭಸ್ಮ!
    In (ರಾಜ್ಯ ) ಜಿಲ್ಲೆ
  • ಏತ ನೀರಾವರಿ ಯೋಜನೆಯ ಪ್ರಾರಂಭಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಇಡ್ಲಿ-ವಡೆ ಜೊತೆಗೆ ಗ್ಯಾಸ್​ಗೂ ಬಿಲ್! :ಭಾರಿ ವೈರಲ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.