ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದಿನಾಂಕ ೦೭-೧೦-೨೦೨೫ ಮಂಗಳವಾರದಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು
ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷರು ಡಾ.ಎಂ.ಬಿ.ಪಾಟೀಲ ಅವರ ಜನ್ಮ ದಿನದ ಹಿನ್ನೆಲೆ ಮಹಾವಿದ್ಯಾಲಯದ ಆವರಣದಲ್ಲಿ ಸಸಿ ನೆಟ್ಟು ಪರಿಸರ ಸಂರಕ್ಷಣೆ ಸಂಕಲ್ಪ ಮಾಡಲಾಯಿತು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ,ಉಪಪ್ರಾಚಾರ್ಯ ಡಾ.ಅನೀಲ್ .ಭೀ ನಾಯಕ,ಡಾ.ಮಹೇಶಕುಮಾರ, ಡಾ.ಶ್ರೀನಿವಾಸ ದೊಡ್ಡಮನಿ, ಡಾ.ಉಷಾದೇವಿ ಹಿರೇಮಠ, ಪ್ರೊ.ವಿದ್ಯಾ ಪಾಟೀಲ,ಡಾ.ಕೃಷ್ಣಾ ಮಂಡ್ಲಾ,ಡಾ.ಎಸ್ ಡಿ.ಲಮಾಣಿ,ಡಾ.ಅಮೀತ್ ತೇರದಾಳೆ,ಪ್ರೊ.ಜೆ.ಬಿ
ಬಿರಾದಾರ ಸೇರಿದಂತೆ ಇನ್ನಿತರ ಮಹಾವಿದ್ಯಾಲಯದ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

