ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ೨೦೨೫ – ೨೦೨೮
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿನ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿಯಾಗಿ ಹಿರಿಯ ಪತ್ರಿಕೋದ್ಯಮಿ ಟಿ ಕೆ ಮಲಗೊಂಡ ಅವರನ್ನು ಅಕ್ಟೋಬರ್ 08/ 2025 ರಂದು ನೇಮಕ ಮಾಡಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಚುನಾವಣೆ ನಿಯಮನಗಳನ್ವಯ ಮತ್ತು ಸಂಘದ ಬೈಲಾ ಪ್ರಕಾರ ಚುನಾವಣೆ ನಡೆಸಿಕೊಡಲು ಸೂಚಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಸಂದರ್ಭದಲ್ಲಿ ಬೈಲಾ ನಿಯಮಗಳ ಸಂಬಂಧ ಹೆಚ್ಚಿನ ಮಾಹಿತಿ ಅಗತ್ಯ ಬಿದ್ದರೆ ರಾಜ್ಯ ಚುನಾವಣಾಧಿಕಾರಿಯವರನ್ನು ಸಂಪರ್ಕಿಸಿ ಎಂದು ಆದೇಶ ಪತ್ರದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ತಿಳಿಸಿದ್ದಾರೆ.
ಹಿರಿಯ ಪತ್ರಿಕೋದ್ಯಮಿ ಟಿ.ಕೆ.ಮಲಗೊಂಡ ಅವರು ಜಿಲ್ಲಾ ಚುನಾವಣಾಧಿಕಾರಿಯಾಗಿ ಸತತ ಮೂರನೇ ಬಾರಿಗೆ ನೇಮಕವಾಗಿದ್ದಾರೆ ಚುನಾವಣೆ ಪಾರದರ್ಶಕತೆಗೆ ಹೆಸರುವಾಸಿಯಾಗಿದ್ದಾರೆ ಎಂಬುದು ಇಲ್ಲಿ ಸ್ಮರಿಸಬಹುದು.

