ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಾಬ್ದಿ ಮತ್ತು ವಿಜಯ ದಶಮಿಯ ಪ್ರಯುಕ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅ.೧೧ ರಂದು ಭವ್ಯ ಪಥಸಂಚಲನ ಹಮ್ಮಿಕೊಳ್ಳಲಾಗಿದೆ.
ಅಂದು ಮಧ್ಯಾಹ್ನ ೩ಕ್ಕೆ ಪಟ್ಟಣದ ಹುಡ್ಕೋ ಬಡಾವಣೆಯ ಗವಿಸಿದ್ದೇಶ್ವರ ಮೈದಾನದಿಂದ ಹೇಮರೆಡ್ಡಿ ಮಲ್ಲಮ್ಮ ವೃತ್ತ, ನ್ಯಾಯಾಲಯದ ಹಿಂಭಾಗ, ಈಶ್ವರ ದೇವಸ್ಥಾನ, ಸ್ಟೇಟ್ ಬ್ಯಾಂಕ್ ರಸ್ತೆ, ಬಸ್ ನಿಲ್ದಾಣದ ಮುಂಭಾಗ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಸಂತ ಕನಕದಾಸ ವೃತ್ತ, ವಾಲ್ಮೀಕಿ ವೃತ್ತ, ಶಾರದಾ ದೇವಿ ದೇವಸ್ಥಾನ, ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ, ಛತ್ರಪತಿ ಶಿವಾಜಿ ವೃತ್ತ, ಸಿದ್ರಾಮೇಶ್ವರ ವೃತ್ತ, ನೇತಾಜಿ ಗಲ್ಲಿ, ಕುಂಬಾರ ಗಲ್ಲಿ, ದ್ಯಾಮವ್ವನ ಗುಡಿ, ಸರಾಫ ಬಜಾರ, ಬಜಾರ ಹನುಮಾನ ದೇವಸ್ಥಾನ, ಬೊಮ್ಮಲಿಂಗೇಶ್ವರ ದೇವಸ್ಥಾನ, ಯಮನೂರಪ್ಪನ ಕಟ್ಟೆ, ದುರ್ಗಾದೇವಿ ಗುಡಿ, ದ್ಯಾಮವ್ವನ ಕಟ್ಟೆ, ಮುಖ್ಯ ಬಜಾರ, ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಮಾರ್ಗವಾಗಿ ವಿ.ಬಿ.ಸಿ ಹೈಸ್ಕೂಲ್ ವರೆಗೆ ಸಾಗಲಿದೆ. ಬಳಿಕ ಸಂಘ ಸಭೆ ಜರುಗಲಿದ್ದು, ಸಭೆಯ ದಿವ್ಯ ಸಾನಿಧ್ಯವನ್ನು ಉಡುಪಿ ಶಿರೂರ ಮಠದ ೧೦೦೮ ವೇದವರ್ಧನ ತೀರ್ಥರು ವಹಿಸುವರು. ಮುಖ್ಯ ಅತಿಥಿಗಳಾಗಿ ಚಿಕ್ಕ ಮಕ್ಕಳ ತಜ್ಞ ಡಾ.ಎಸ್.ಬಿ.ನಾಗೂರ, ಸಂಘದ ಪ್ರಚಾರ ಪ್ರಮುಖರಾದ ಅರುಣಕುಮಾರ ಅವರು ವಕ್ತಾರರಾಗಿ ಅಗಮಿಸಲಿದ್ದಾರೆ.