ವಿಜಯಪುರ: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕ ವತಿಯಿಂದ ಸಹಮತ ಸೂಚಿಸಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ದಿಲಾವರ್ ಖಾಜಿ ತಿಳಿಸಿದ್ದಾರೆ.
ನಗರದ ಜಾತ್ಯಾತೀತ ಜನತಾದಳ ಜಿಲ್ಲಾ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಶೀಟ್ ಗೆಲ್ಲಿಸುವಲ್ಲಿ ಶ್ರಮಿಸಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಾತ್ಯಾತೀತ ಜನತಾದಳದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಏಜಾಜ ಅಹ್ಮದ ಮುಕಬೀಲ್, ಮಾತನಾಡಿ, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಪ್ರಾಮುಖ್ಯತೆ ನೀಡಿರುವುದನ್ನು ಸ್ಮರಿಸಿದರು. ೧೯೯೪ ರಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರು ಮುಖ್ಯಮಂತ್ರಿಗಳಿದ್ದ ಸಮಯದಲ್ಲಿ ಅಲ್ಪಸಂಖ್ಯಾತರಿಗೆ ಶೇ.೪ ರಷ್ಟು ಮೀಸಲಾತಿಯನ್ನು ನೀಡಿ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸುವಲ್ಲಿ ಶ್ರಮಿಸಿದ ಮಹಾನ ನಾಯಕರು ಎಂದು ಸ್ಮರಿಸಿದರು. ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಧೀಕಾರವಾದಿಯಲ್ಲಿ ಜನಪರ ಯೋಜನೆಗಳನ್ನು ತರುವ ಮೂಲಕ ಎಲ್ಲಾ ವರ್ಗದ ಜನರಿಗೆ ಮತ್ತು ರೈತರಿಗೆ ಸಾಲ ಮನ್ನಾ ಯೋಜನೆಯನ್ನು ತಂದಿದ್ದು, ಸನ್ ೨೦೦೬ ರಲ್ಲಿ ಮುಖ್ಯಮಂತ್ರಿಗಳಾದ ಸಮಯದಲ್ಲಿ ಅಲ್ಪಸಂಖ್ಯಾತ ಹೆಣ್ಣು ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಿದ ಕಿರ್ತಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದರು.
ಈ ವೇಳೆಯಲ್ಲಿ ಜೆಡಿಎಸ್ ಉಪಾಧ್ಯಕ್ಷರಾದ ಹುಸೇನ ಬಾಗಾಯತ, ಸಾಜೀದ ರಿಸಾಲದಾರ, ಮುಕ್ಕದಸ್ ಇನಾಮದಾರ, ಜಾಕೀರ ಅಮೀನಗಡ, ಜಾಫರ ಕಲಾದಗಿ, ವಾಜೀದ ಖಾಜಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment