Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖಾಕಿ ಪಡೆಯ ಭರ್ಜರಿ ಬೇಟೆ :ಬ್ಯಾಂಕ್ ದರೋಡೆಕೋರರ ಬಂಧನ!
(ರಾಜ್ಯ ) ಜಿಲ್ಲೆ

ಖಾಕಿ ಪಡೆಯ ಭರ್ಜರಿ ಬೇಟೆ :ಬ್ಯಾಂಕ್ ದರೋಡೆಕೋರರ ಬಂಧನ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಡಚಣ ಬ್ಯಾಂಕ್ ದರೋಡೆ ಪ್ರಕರಣ | ವಿಜಯಪುರ ಪೋಲಿಸರಿಂದ ಭರ್ಜರಿ ಕಾರ್ಯಾಚರಣೆ | ಹೊರ ರಾಜ್ಯದ ನಾಲ್ವರ ಬಂಧನ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಎಸ್‌ಬಿಐ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಭಾಗಿಯಾದ ಮಹಾರಾಷ್ಟ್ರ-ಬಿಹಾರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಡಿಜಿಪಿ (ಕಾ.ಸು) ಆರ್.ಹಿತೇಂದ್ರ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣ ಬೇಧಿಸುವಲ್ಲಿ ವಿಜಯಪುರ ಪೊಲೀಸರು ಉತ್ತಮ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಗಳಾದ ಬಿಹಾರದ ಸಮಸ್ತಿಪುರ ನಿವಾಸಿಗಳಾದ ರಾಕೇಶ ಕುಮಾರ ಶಿವಾಜಿ ಸಹಾನಿ (೨೨), ರಾಜಕುಮಾರ ರಾಮಲಾಲ್ ಪಾಸ್ವಾನ (೨೧) ಹಾಗೂ ರಕ್ಷಕುಮಾರ ಮದನ ಮಾತೋ (೨೧) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ ಮೂಲದ ಆರೋಪಿಯ ಹೆಸರು ಪೊಲೀಸರು ತನಿಖೆಯ ದೃಷ್ಟಿಯಿಂದ ಆತನ ಹೆಸರು ಬಹಿರಂಗೊಳಿಸಲು ಸಧ್ಯ ಆಗದು ಎಂದರು.
ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಒಟ್ಟಾರೆಯಾಗಿ ೯.೦೧ ಕೆಜಿ ಬಂಗಾರ ಹಾಗೂ ೮೬,೩೧,೨೨ ರೂ. ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಉಳಿದ ಚಿನ್ನಾಭರಣ, ನಗದು ಹಣವನ್ನು ಅಧಿಕಾರಿಗಳು ಶೀಘ್ರವೇ ಪತ್ತೆ ಹಚ್ಚಲಿದ್ದಾರೆ ಎಂದರು.
ಕಳೆದ ತಿಂಗಳ ಸೆ.೧೬ ರಂದು ಸಂಜೆ ೭.೨೦ ರ ಸುಮಾರಿಗೆ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ಶಾಖೆಗೆ ನುಗ್ಗಿದ ಮೂವರು ಮುಸುಕುಧಾರಿಗಳು ಸುಮಾರು ೧.೦೪ ಕೋಟಿ ರೂ.ನಗದು ಹಾಗೂ ೨೦ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು..
ಆರೋಪಿತರು ಕೃತ್ಯ ಎಸಗಿ ಪರಾರಿಯಾಗಲು ಬಳಸಿದ್ದ ಮಾರುತಿ ಇಕೋ ಕಾರು, ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಹುಲಜಂತಿ ಗ್ರಾಮದಲ್ಲಿ ಅಪಘಾತಕ್ಕೀಡಾಗಿತ್ತು. ಅಲ್ಲಿ ಸಾರ್ವಜನಿಕರು ಸೇರಿ ಸುತ್ತುವರೆಯುತ್ತಿದ್ದಂತೆ ಕಾರಿನ ಚಾಲಕನು ಪಿಸ್ತೂಲ್ ತೋರಿಸಿ, ಸಾರ್ವಜನಿಕರನ್ನು ಬೆದರಿಸಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದ, ಈ ಸುಳಿವು ಆಧರಿಸಿ ತನಿಖಾ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿದ್ದ ೮೮೮.೩೩ ಗ್ರಾಂ ಚಿನ್ನದ ಆಭರಣಗಳಿದ್ದ ೨೧ ಪ್ಯಾಕೇಟ್ ಹಾಗೂ ೧,೦೩,೧೬೦ ರೂ. ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಆರೋಪಿಗಳು ಹುಲಜಂತಿ ಗ್ರಾಮದ ಒಂದು ಪಾಳುಬಿದ್ದ ಮನೆಯ ಮೇಲ್ಛಾವಣಿಯ ಮೇಲೆ ಒಂದು ಬ್ಯಾಗನ್ನು ಎಸೆದು ಹೋಗಿದ್ದು ಅದರಲ್ಲಿ ೬.೫೪ ಕೆಜಿ ಚಿನ್ನಾಭರಣಗಳು ಹಾಗೂ ೪೧,೦೩,೦೦೦ ರೂ. ನಗದು ಸಹ ಪತ್ತೆಯಾಗಿತ್ತು, ಕಾರಿನಲ್ಲಿದ್ದ ಚಿನ್ನ ಮತ್ತು ಹಣವನ್ನು ತೆಗೆದುಕೊಂಡು ಹೋಗಿದ್ದ ಹುಲಜಂತಿಯ ೧೫ ಜನರಿಂದ ೧.೫೮೭ ಕೆ.ಜಿ ಬಂಗಾರ ಹಾಗೂ ೪೪,೨೫,೦೬೦ ರೂ. ನಗದು ಹಣ ಜಪ್ತಿ ಮಾಡಲಾಗಿದೆ ಎಂದರು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಎಎಸ್‌ಪಿ ರಾಮನಗೌಡ ಹಟ್ಟಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿಗಳಾದ ಜಗದೀಶ ಎಚ್.ಎಸ್., ಸುನೀಲ ಕಾಂಬಳೆ, ಅಧಿಕಾರಿಗಳಾದ ಸುರೇಶ ಬೆಂಡೆ ಗುಂಬಳ, ಎಂ.ಎಂ. ಡಪ್ಪಿನ್, ರಮೇಶ ಅವಜಿ, ರಾಕೇಶ ಬಗಲಿ, ಶ್ರೀಕಾಂತ ಕಾಂಬ್ಳೆ, ಮನಗೂಳಿ, ಎನ್.ಜಿ. ಅಪನಾಯ್ಕರ, ಸೋಮೇಶ ಗೆಜ್ಜಿ, ಮಂಜುನಾಥ ತಿರಕನ್ನವರ, ಅರವಿಂದ ಅಂಗಡಿ, ದೇವರಾಜ ಉಳಾಗಡ್ಡಿ ಒಳಗೊಂಡ ೭ ವಿಶೇಷ ತನಿಖಾ ತಂಡಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ ಮತ್ತು ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಎಡಿಜಿಪಿ ಹಿತೇಂದ್ರ ಅವರು ಶ್ಲಾಘಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಉತ್ತರ ವಲಯ ಐಜಿಪಿ ಚೇತನಸಿಂಗ್ ರಾಥೋಡ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ

ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳೆ ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಿ :ಎಸಿ ದಡ್ಡೆ
    In (ರಾಜ್ಯ ) ಜಿಲ್ಲೆ
  • ಸಂಭ್ರಮದ ದೀಪಾವಳಿ ಹಬ್ಬಕ್ಕೆ ನಾಗರಿಕರ ಭರದ ಸಿದ್ದತೆ
    In (ರಾಜ್ಯ ) ಜಿಲ್ಲೆ
  • ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಅರ್ಜಿ ಕರೆ
    In (ರಾಜ್ಯ ) ಜಿಲ್ಲೆ
  • ಅ.೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರೀಡಾ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಯುವ ಕೇಂದ್ರದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಗಾಯನ ಸ್ಪರ್ಧೆ: ವಿಜಯ ಕೊಲ್ಹಾರ ರಾಜ್ಯಕ್ಕೆ ಪ್ರಥಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.