ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ ೩೧ ಕೊನೆಯ ದಿನವಾಗಿದ್ದು, ಞsbಜb.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೊಟೆಲ್ ಉದ್ಯಮ, ಟ್ಯಾಕ್ಸಿ ಕೈಗೊಳ್ಳಲು ೧ ಲಕ್ಷ ರೂ ಗಳಿಂದ ೨ ಲಕ್ಷ ರೂ. ವರೆಗೂ ಸಾಲ ಸೌಲಭ್ಯ ಒದಗಿಸಲಾಗುವುದು.
ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಮಹಿಳೆಯರಿಗೆ ಶೇ.೩೩ರಷ್ಟು ಹಾಗೂ ವಿಶೇಷಚೇತನರಿಗೆ ಶೇ ೫ರಷ್ಟು ಮೀಸಲಾತಿ ನೀಡಲಾಗುವುದು. ಅರ್ಜಿದಾರರ ಆಧಾರ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಹಾಗೂ ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ೮೭೬೨೨೪೯೨೩೦ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.