ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ.ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.
ಅ.9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.
ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್ ವಿಭಾಗದ ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳನ್ನು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಪ್ಲೆಸಮೆಂಟ್ ಅಧಿಕಾರಿ ಸುಧನ್ವ. ವಿ. ಕುಲಕರ್ಣಿ, ಸಂತೋಷ ಹಿರೇಮಠ, ಪಾಂಡುರಂಗ ಅಸ್ಲಂಕರ, ಐ. ಎಫ್. ಪಾಟೀಲ, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಎಂ. ಸಿ. ಬಿರಾದಾರ, ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತರಿದ್ದರು.
ಈ ನೇರ ಸಂದರ್ಶನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಹಾಗೂ ಆಡಳಿತ ಮಂಡಳಿ ನಿರ್ದೇಶಕರು, ಕಾಲೇಜಿನ ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.