ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಭಾಗ್ಯಲಕ್ಷ್ಮಿ ಯೋಜನೆಡಿಯಲ್ಲಿ ಬರುವ ಸನ್ 2006/07ನೇ ಸಾಲಿನಲ್ಲಿ ಜನಸಿದ ಭಾಗ್ಯಲಕ್ಷ್ಮಿ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವ ಫಲಾನುಭವಿಗಳಿಗೆ ಪರಿಪಕ್ವ ಮೊತ್ತ ಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ಫಲಾನುಭವಿಗಳು ಅಕ್ಟೋಬರ್ 30ರ ಒಳಗೆ ಸಂಬಂಧಿಸಿದ ದಾಖಲಾತಿಗಳನ್ನು ಸಿಂದಗಿ ತಾಲೂಕ ಶಿಶು ಅಭಿವೃಧ್ಧಿ ಯೋಜನಾಧಿಕಾಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಪರಿಗಣಿಸುವದಿಲ್ಲ ಎಂದು ಸಿಂದಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನಿಲ ಕೆ ಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ