ಕಾನಿಪ ಸಂಘದ ಚುನಾವಣೆ 2025-2028 | ಅಂದೇ ಫಲಿತಾಂಶ ಪ್ರಕಟ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ( Karnataka union of working journalists)” ದ 2025-28 ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಯಾಗಿ ಚುನಾವಣೆ ಘೋಷಣೆಯಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸುಮಾರು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದೆ.
ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.
ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಮತದಾರರ ಕರಡು ಪ್ರತಿ ಪ್ರಕಟವಾಗಲಿದೆ.
ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.
ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಕಾರ್ಯಾಲಯದಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ ಕೆ.ಮಲಗೊಂಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
