ಉದಯರಶ್ಮಿ ದಿನಪತ್ರಿಕೆ
ಇಂಡಿ: ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಸಂಘಟನಾ ಚತುರರು ಬಿ. ಎಸ್. ಕವಲಗಿ ಅವರಿಗೆ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮೀತಿ ಅಧ್ಯಕ್ಷ ರೇವಣ್ಣ ಹತ್ತಳ್ಳಿ ಅಭಿನಂದನೆಗಳು ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಮಣ್ಣ ಕವಲಗಿ ಅವರು, ಸುಮಾರು 50 ವರ್ಷ ಕಾಂಗ್ರೆಸ್ ಪಕ್ಷದ ಕಟ್ಟ ಕಾರ್ಯಕರ್ತರಾಗಿ, ಪಕ್ಷದ ಸಲುವಾಗಿ ಹಗಲು ಇರಳು ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷ ಅನೇಕ ಚುನಾವಣೆಯಲ್ಲಿ ಸಂಕಷ್ಟದ ಪರಿಸ್ಥಿತಿಯಲ್ಲಿರುವಾಗ ಗೆಲುವಿನ ನಗೆ ಬಿರಲು ಕಾರಣರಾಗಿದ್ದಾರೆ. ಇಂದು ತಮ್ಮ ಇಳಿಯ ವಯಸ್ಸನಲ್ಲಿಯೂ ಕ್ಷೇತ್ರದ ಜೊತೆಯಲ್ಲಿ ಜಿಲ್ಲೆಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳಿಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿದ್ದಾರೆ. ಇಂದು ಆ ಕಾರಣಕ್ಕಾಗಿ ಅವರನ್ನು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಲು ಕಾರಣರಾಗಿರುವ
ಶಾಸಕ ಯಶವಂತರಾಯಗೌಡ ಪಾಟೀಲ,ಕಾಂಗ್ರೆಸ್ ಪಕ್ಷದ ರಾಜ್ಯ,ರಾಷ್ಟ್ರ ವರಿಷ್ಠರಿಗೆ ಹಾಗೂ ಮುಖಂಡರಿಗೂ ನಮ್ಮ ಅಖಿಲ ಕರ್ನಾಟಕ ನಾಯಕ ತಳವಾರ ಸಮಿತಿ ವತಿಯಿಂದ ಕೃತಜ್ಞತೆ ತಿಳಿಸುತ್ತೆನೆ ಎಂದು ಹೇಳಿದರು.

