ಸಿಂದಗಿ: ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕಪೋರ್ಸ ಸಮಿತಿ ಸಭೆಯನ್ನು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ತಾಲೂಕಾ ನೂಡಲ್ ಅಧಿಕಾರಿ ಪುಂಡಲೀಕ ಮಾನವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕಪೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೨೦೨೩-೨೪ನೆಯ ಸಾಲಿನಲ್ಲಿ ಸಿಂದಗಿ ತಾಲೂಕನ್ನು ತೀವ್ರ ಬರಪೀಡಿತ ತಾಲೂಕು ಅಂತಾ ಘೋಷಣೆಯಾದ ಹಿನ್ನೆಲೆಯಲ್ಲಿ ಪ್ರತಿವಾರ ಸಭೆ ನಡೆಸಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿರುವ ಕುಡಿಯುವ ನೀರು, ಉತ್ತಮ ನೀರಿನ ಇಳುವರಿ ಹೊಂದಿರುವ ಖಾಸಗಿ ಕೊಳವೆ ಭಾವಿಗಳನ್ನು ಗುರುತಿಸುವದು. ಬೆಳೆ ಹಾನಿ, ಜಂಟಿ ಸಮೀಕ್ಷೆ ಕಾರ್ಯದ ಪ್ರಗತಿ ಬಗ್ಗೆ ಪರಶೀಲನೆ, ಅಗತ್ಯವಿದ್ದಲ್ಲಿ ಮೇವು ಬ್ಯಾಂಕ/ಗೋಶಾಲೆ ಸ್ಥಾಪಿಸುವುದು. ಜನರು ಗುಳೆ ಹೋಗದಂತೆ ತಡೆಯಲು ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ಮಾಡಲು ಸೂಚಿಸಿದರು. ಪ್ರತಿವಾರ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಗ್ರಾಮಗಳಿಗೆ ತಾಲೂಕಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಸಮಸ್ಯೆ ಕುರಿತು ಕ್ರಮ ವಹಿಸುಬೇಕು ಎಂದು ಅಧಿಕಾರಗಳಿಗೆ ಸೂಚನೆ ನೀಡಿದರು.
ಈ ವೇಳೆ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ, ತಾಲೂಕು ಮಟ್ಟದ ಅಧಿಕಾರಗಳು, ಸಿಬ್ಬಂದಿ ಸೇರಿದಂತೆ ಅನೇಕರು ಇದ್ದರು.
Related Posts
Add A Comment