ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಅ.೨೩ ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.