ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಕೀಲರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ, ಅನುಭವ ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವೆಬ್‌ಸೈಟ್https://vijayapura.dcourts.gov.in/dlsa/ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.