ಉದಯರಶ್ಮಿ ದಿನಪತ್ರಿಕೆ
ಇಂಡಿ: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಮಾನವ ಹಕ್ಕುಗಳ ತನಿಖಾ ಸಮಿತಿಯ ಇಂಡಿ ತಾಲೂಕ ಅಧ್ಯಕ್ಷರಾಗಿ ಶಿವಾನಂದ ಕಾಮಗೊಂಡ, ಗೌರವಾಧ್ಯಕ್ಷರಾಗಿ ಉಮೇಶ ಬಳಬಟ್ಟಿ, ಉಪಾಧ್ಯಕ್ಷರಾಗಿ ಪ್ರಕಾಶ ಬಿರಾದಾರ, ಜಂಟಿ ಕಾರ್ಯದರ್ಶಿಯಾಗಿ ಶ್ರೀಶೈಲ ಬೀಳಗಿ, ಪ್ರಧಾನ ಕಾರ್ಯದರ್ಶಿಯಾಗಿ ಸನ್ಮತಿ ಹಳ್ಳಿ, ಕಾನೂನು ಸಲಹೆಗಾರರನ್ನಾಗಿ ಪ್ರಸನ್ನಕುಮಾರ ನಾಡಗೌಡ, ಸದಸ್ಯರನ್ನಾಗಿ ಶ್ರೀಮಂತ ಬಿರಾದಾರ್ ಅವರನ್ನು ನೇಮಕ ಮಾಡಲಾಗಿದೆ. ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ಸಂಸ್ಥಾಪಕ ಸಂತೋಷ್.ಕೆ ಹಾಗೂ ವಿಜಯಪುರ ಜಿಲ್ಲಾ ಅಧ್ಯಕ್ಷ ಪೂರ್ಣಾನಂದ ಎಸ್.ಎನ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲ ಪದಾಧಿಕಾರಿಗಳು ತಮಗೆ ನೀಡಿದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ, ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಹೋರಾಟ ಹಮ್ಮಿಕೊಂಡು ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳುವಳಿಕೆ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.