ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ತಾಲೂಕಿನ ಮುಳವಾಡ ಮಲ್ಲಿಕಾರ್ಜುನ ಪ್ರೌಢಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ದೂರದರ್ಶಕ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಟೆಲೆಸ್ಕೋಪ ತಯಾರಿಸಿ ವರ್ಲ್ಡ ಬುಕ್ ಆಪ್ ರೆಕಾರ್ಡ್, ಏಷ್ಯ ಬುಕ್ ಆಫ್ ರೆಕಾರ್ಡ ಹಾಗೂ ಇಂಡಿಯ ಬುಕ್ ಆಫ್ ರೆಕಾರ್ಡ್ ಗಳಲ್ಲಿ ಸ್ಥಾನ ಪಡೆದಿದ್ದಾನೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ತಿನ ಅಡಿಯಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಮಕ್ಕಳ ಟೆಲೆಸ್ಕೋಪ ತರಬೇತಿ ಸಿಬಿರ ಯಶಸ್ವಿಯಾಗಿ ಜರುಗಿತು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 250 ಕ್ಕೂ ಹೆಚ್ಚು ಬಾಲವಿಜ್ಞಾನಿಗಳು ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಹೆಸರನ್ನು ಎತ್ತಿ ಹಿಡಿದಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ ಅವರು , ಇಸ್ರೋದ ಶ್ರೇಷ್ಠ ವಿಜ್ಞಾನಿಗಳಾದ ಕಿರಣಕುಮಾರರು ಹಾಗೂ ಪರಿಷತ್ ಅಧ್ಯಕ್ಷರಾದ ಹುಲಿಕಲ್ಲ ನಟರಾಜ ಸೇರಿ ಕುಮಾರ ಕೃಷ್ಣ ಕುಂಬಾರನಿಗೆ “ನಾನೂ ವಿಜ್ಞಾನಿ-2025” ಪ್ರಶಸ್ತಿಯನ್ನು ಹಾಗೂ ಮುಳವಾಡ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಾದ ಡಿ.ಎಸ್.ಖಿಲಾರಿ ಅವರಿಗೂ ವರ್ಲ್ಡ ಆಫ್ ರೆಕಾರ್ಡ ಪ್ರಶಸ್ತಿಯಯನ್ನು ನೀಡಿ ಗೌರವಿಸಿದರು.
ಸಾಧನೆಗೈದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಹಾಗೂ ಜಿಲ್ಲಾ ಅಧ್ಯಕ್ಷ ಸಂಗಮೇಶ ಬುರ್ಲಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮೀಸಾಳೆ ಮತ್ತು
ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ ಮತ್ತು ಊರಿನ ಗಣ್ಯರು ಕೃತಜ್ಞತೆಗಳನ್ನು ಸಲ್ಲಿಸಿದರು.