Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಡಗುಂದಿ ವಿವಿಧ ತಾಲೂಕಾ ಕಚೇರಿಗೆ ಡಿಸಿ ಡಾ.ಆನಂದ ಭೇಟಿ
(ರಾಜ್ಯ ) ಜಿಲ್ಲೆ

ನಿಡಗುಂದಿ ವಿವಿಧ ತಾಲೂಕಾ ಕಚೇರಿಗೆ ಡಿಸಿ ಡಾ.ಆನಂದ ಭೇಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ ನಿಗದಿತ ಸಮಯದಲ್ಲಿ ವಿಲೆಗೆ ಕ್ರಮ ವಹಿಸಬೇಕು. ಕಚೇರಿ, ಕಚೇರಿ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ತಹಶೀಲ್ದಾರ ಕಚೇರಿ ಎದುರಿನ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ನ್ಯಾಯ ಬೆಲೆ ಅಂಗಡಿಯಲ್ಲಿ ಸ್ಟಾಕ್ ರಜಿಸ್ಟರ್ ನಿರ್ವಹಣೆ ಮಾಡಬೇಕು. ಗ್ರಾಹಕರಿಗೆ ನಿಗದಿತ ಅವಧಿಯಲ್ಲಿ ಆಹಾರ ಧಾನ್ಯಗಳನ್ನು ಎಲ್ಲ ಪಡಿತರ ಚೀಟಿದಾರರಿಗೆ ಹಂಚುವಂತೆ ಅವರು ಸೂಚನೆ ನೀಡಿದರು.
ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಸ ಕಂಡಲ್ಲಿ ಫೋಟೋ ಕಳುಹಿಸಿ ಅಭಿಯಾನವನ್ನು ಸಮರ್ಪಕವಾಗಿ ಜಾರಿಗೊಳಿಸಿ ಕಸಮುಕ್ತವಾಗಿಸಲು ಕ್ರಮ ವಹಿಸಬೇಕು. ಕಸ ವಿಲೇವಾರಿ ಘಟಕ ಸ್ಥಾಪನೆಗೆ ಗುರುತಿಸಲಾದ ಸ್ಥಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿ ಔಷಧ ವಿತರಣೆ ಕೌಂಟರ್ ಸೇರಿದಂತೆ ಆಸ್ಪತ್ರೆಯಲ್ಲಿ ರೋಗಿಗಳಿಗೆ ಒದಗಿಸಲಾಗುತ್ತಿರುವ ಚಿಕಿತ್ಸೆ ಕುರಿತು ಪರಿಶೀಲನೆ ನಡೆಸಿದ ಅವರು, ಮಕ್ಕಳು, ಗರ್ಭೀಣಿಯರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸೂಚಿಸಿದ ಅವರು, ಡಯಾಬಿಟಿಸ್ ಕೇಂದ್ರವನ್ನು ಪರಿಶೀಲನೆ ನಡೆಸಿದರು.
ಆಲಮಟಿಯ ಮರಿಮಟ್ಟಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಒದಗಿಸಲಾಗುತ್ತಿರುವ ಚಿತ್ರಾನ್ನ-ಮೊಟ್ಟೆಯನ್ನು ಸ್ವತ: ಜಿಲ್ಲಾಧಿಕಾರಿಗಳು ಸೇವಿಸಿ ಆಹಾರ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅವರು ಸೂಚನೆ ನೀಡಿ, ನಂತರ ಆಲಮಟ್ಟಿ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ಸಕಾಲಕ್ಕೆ ಮಾಹಿತಿ ನೀಡಬೇಕು. ಕೇಂದ್ರದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ನಿಡಗುಂದಿ ತಹಶೀಲ್ದಾರ ಎ.ಡಿ.ಅಮರಾವದಗಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರತಾಪ ಕೊಡಗೆ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿಲ್ಪಾ ಹಿರೇಮಠ, ವೈದ್ಯಾಧಿಕಾರಿ ಪ್ರಕಾಶ ನಾಟೀಕಾರ, ಆಹಾರ ನಿರೀಕ್ಷಕ ಗುತ್ತರಗಿ, ಕಂದಾಯ ನಿರೀಕ್ಷಕ ಸಲೀಮ ಯಲಗೋಡ, ಗ್ರಾಮಾಡಳಿತಾಧಿಕಾರಿ ನಾನಾಗೌಡ ಪಾಟೀಲ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು

ಶ್ರಮಯೇವ ಜಯತೆ..

ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್

ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 01, 2026
    In ದಿನಪತ್ರಿಕೆ
  • ಮೂಢನಂಬಿಕೆಯಿಂದ ವೈಚಾರಿಕತೆಯತ್ತ ಕರೆದೊಯ್ದ ಬಸವಣ್ಣನವರು
    In (ರಾಜ್ಯ ) ಜಿಲ್ಲೆ
  • ಶ್ರಮಯೇವ ಜಯತೆ..
    In ವಿಶೇಷ ಲೇಖನ
  • ಕೆಎಸ್ಒಯು ಜೊತೆ ಶೈಕ್ಷಣಿಕ ಒಪ್ಪಂದ :ಡಾ.ಅರುಣ್ ಕುಮಾರ್
    In (ರಾಜ್ಯ ) ಜಿಲ್ಲೆ
  • ಕೃಷಿ ಮತ್ತು ಉದ್ಯಮಿ ವಲಯಕ್ಕೆ ಹೆಚ್ಚಿನ ಒತ್ತು :ಸಿಇಓ ರಿಷಿ ಆನಂದ್
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಬಾಲಭವನದ ಬೇಸಿಗೆ ಶಿಬಿರದ ಸಮಾರೋಪ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಮಲೇರಿಯಾ ಕೆಲವೊಮ್ಮೆ ಮಾರಕವಾಗಬಹುದು :ಕೋಳೆಕರ
    In (ರಾಜ್ಯ ) ಜಿಲ್ಲೆ
  • ಶಿಕ್ಷಕರ ಸಂಘಕ್ಕೆ ಮೇ ೧೦ಕ್ಕೆ ಚುನಾವಣೆ :ಅಂದೇ ಫಲಿತಾಂಶ
    In (ರಾಜ್ಯ ) ಜಿಲ್ಲೆ
  • ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ಆದರ್ಶಗಳು
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.