ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ಕಾಂಗ್ರೆಸ್ ಪಕ್ಷದ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ವಿಭಾಗದ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರನ್ನಾಗಿ ಮುಖಂಡ ತೌಫಿಕ ಪಾರ್ಥನಳ್ಳಿ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ, ಕಾನೂನು ಮಾನವ ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ಉಪಾಧ್ಯಕ್ಷ ಡಾ.ಎ.ಜೆ.ಅಕ್ರಂ ಪಾಶಾ ಅವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಾ.ಟಿ.ವೈ.ಕುಮಾರ ತಿಳಿಸಿದ್ದಾರೆ.

