ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವ ಸಂಸ್ಕೃತಿ ಅಭಿಯಾನ, ಲಿಂಗಾಯತ ಮಠಾಧೀಶರ ಒಕ್ಕೂಟದ ವಿರುದ್ಧ ಕನ್ಹೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆ ಕನ್ಹೇರಿ ಸ್ವಾಮೀಜಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಗುರುವಾರ ಮಠಾಧೀಶರ ನೇತೃತ್ವದಲ್ಲಿ ವಿವಿಧ ಬಸವ ಪರ ಸಂಘಟನೆಗಳಿಂದ ಹೋರಾಟ ನಡೆಸಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರಹಾಕಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

