ಸಿಂದಗಿ: ಮಹಿಳೆಯರು ಸಾಮಾಜಿಕವಾಗಿ ಸಬಲೀಕರಣ ಹೊಂದಿದಾಗ ಆರ್ಥಿಕ ಸದೃಡತೆ ಸಾಧಿಸಲು ಸಾಧ್ಯ ಎಂದು ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಆಪ್ತಸಮಾಲೋಚಕಿ ಸುಜಾತ ಕಲಬುರಗಿ ಹೇಳಿದರು.
ಪಟ್ಟಣದ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಕ್ಷೇತ್ರ ಅಧ್ಯಯನಕ್ಕಾಗಿ ಭೇಟಿ ನೀಡಿದ ಸ್ವ ಸಹಾಯ ಮಹಿಳಾ ಸಂಘಗಳಿಗೆ ಮಾಹಿತಿ ನೀಡಿದ ಅವರು, ಮಹಿಳೆಯರು ಸಬಲೀಕರಣ ಹೊಂದಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಈ ದಿಸೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆಯು ಅನೇಕ ಜನಜಾಗೃತಿ ಯೋಜನೆಗಳನ್ನು ಮಹಿಳೆಯರಿಗಾಗಿ ಹಮ್ಮಿಕೊಳ್ಳುತ್ತಿದೆ. ಮಹಿಳಾ ಸಂಘಟನೆಯ ಮೂಲಕ ಮಹಿಳೆಯರು ಆತ್ಮವಿಶ್ವಾಸದ ಮೂಲಕ ಸ್ವಯಂ ಉದ್ಯೋಗವನ್ನು ಮೆಗೂಡಿಸಿಕೊಳ್ಳಬೇಕು. ಅಂದಾಗ ಮಾತ್ರ ಮಹಿಳೆಯರಲ್ಲಿರುವ ಭಯ, ಹಿಂದೆ ಸರೆಯುವು ಮನೋಭಾವ ದೂರವಾಗಿ ಆತ್ಮಸ್ಥೆರ್ಯ ಹೊಂದಲು ಸಾಧ್ಯ ಎಂದು ತಿಳಿಸಿದರು.
ಇದೇ ವೇಳೆ ತಾಲೂಕಾ ಎಸ್.ಕೆ.ಡಿ.ಆರ್.ಡಿ. ಪಿ ಯ ಅಧಿಕಾರಿ ದೇವಿಕಾ ತೆಲಂಗ, ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಮಹಿಳಾ ಸಂಘದ ಸದಸ್ಯರು ಇದ್ದರು.
Related Posts
Add A Comment