ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ವಿಜಯಪುರದ ಡಾ.ಬಾಬಾಸಾಹೇಬ ಅಂಬೇಡ್ಕರ ವೃತ್ತದಲ್ಲಿ ಅ.18 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘವು ಕುರುಬರ ಎಸ್ಟಿ ಮೀಸಲಾತಿಗಾಗಿ ವಿಜಯಪುರ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಗೆ ಕುರುಬ ಸಮಾಜದ ಎಲ್ಲಾ ಸಂಘಟನೆಗಳು, ಎಲ್ಲ ಬಾಂಧವರು ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಮಟ್ಟದ ಕುರುಬರ ಸಂಘದ ತಾಲೂಕಾಧ್ಯಕ್ಷ ಸಿದ್ದಣ್ಣ ಹೆರಕಲ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.