ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ನಿರ್ದೇಶನಾಲಯ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಶನ್ ಅವರ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕ್ಟೋಬರ್ ೧೮ರಂದು ಟ್ರೇಜರಿ ಕಾಲೋನಿಯಲ್ಲಿರುವ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ತಮ್ಮ ಇಮೇಲ್‌ನಲ್ಲಿ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅಕ್ಟೋಬರ್ ೧೭ರೊಳಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪಡೆಯಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.