ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ ಸಂಖ್ಯೆ: ೨೨೨ ರಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ೫೦ ಸಾವಿರ ರೂ.ಗಳ ಸಹಾಯಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ೫೦ ಸಾವಿರ ರೂಪಾಯಿಗಳು ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗುವುದು. ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ ೧೦ ಜೋಡಿಗಳು ಭಾಗವಹಿಸಿರತಕ್ಕದ್ದು. ಈ ಸೌಲಭ್ಯ ಪಡೆಯುವ ವಧುವಿಗೆ ಕನಿಷ್ಠ ೧೮ ವರ್ಷದಿಂದ ಗರಿಷ್ಠ ೪೨ ವರ್ಷಗಳು, ವರನಿಗೆ ಕನಿಷ್ಠ ೨೧ ವರ್ಷದಿಂದ ಗರಿಷ್ಠ ೪೫ ವರ್ಷ ವಯಸ್ಸು ಆಗಿರತಕ್ಕದ್ದು. ಈ ಯೋಜನೆಯಡಿ ಸಹಾಯಧನ ಪಡೆಯಲು ವಧು-ವರರ ವಾರ್ಷಿಕ ಆದಾಯವು ೨.೫೦ ಲಕ್ಷ ರೂ.ಗಳು ಮತ್ತು ಒಟ್ಟಾರೆಯಾಗಿ ೫ ರೂ. ಲಕ್ಷಗಳನ್ನು ಮೀರತಕ್ಕದ್ದಲ್ಲ. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡತಕ್ಕದ್ದು. ಈ ಸಾಮೂಹಿಕ ವಿವಾಹವು ಇತರೆ ಜಿಲ್ಲೆಗಳಲ್ಲಿ ನಡೆದಿದ್ದಲ್ಲಿ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆರವರು ದೃಢೀಕರಿಸುವುದು. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು. ಯಾವುದೇ ತರಹದ ಬಾಲ್ಯವಿವಾಹ ಅಥವಾ ಅಪ್ರಾಪ್ತ ವಯಸ್ಸಿನ ವಿವಾಹಗಳು ಜರುಗದಿರುವಂತೆ ಖಾತ್ರಿಪಡಿಸಿಕೊಳ್ಳುವ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ (ಸಿ.ಡಿ.ಪಿ,ಒ) ರವರು ಈ ಪ್ರಕ್ರಿಯೆಯ ಭಾಗವನ್ನಾಗಿಸತಕ್ಕದ್ದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ೫೦೦೦ ರೂ.ಗಳನ್ನು ನೀಡುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿAದ ೩ ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಸಂಬAಧಪಟ್ಟ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು. ಪ್ರೋತ್ಸಾಹ ಧನ ಪಡೆಯಲು ಮದುವೆ ದಿನಾಂಕದ ೦೩ ತಿಂಗಳ ಒಳಗಾಗಿ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರ ಕಚೇರಿಗೆ ನಿಗಧಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಾದ ವಿಜಯಪುರ ಮೊ:೮೧೨೩೭೧೦೭೬೬,ಮುದ್ದೇಬಿಹಾಳ ಮೊ:೮೭೨೨೪೪೫೫೫೨,ಬಸವನ ಬಾಗೇವಾಡಿ ಮೊ: ೯೯೭೨೩೪೦೭೩೨೧,ಇಂಡಿ ಮೊ: ೯೯೦೦೧೦೯೭೫೯ ಹಾಗೂ ಸಿಂದಗಿ ಮೊ: ೯೦೩೫೫೫೮೬೦೯ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.