ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆರೋಗ್ಯ ಕೇಂದ್ರ ಹಾಗೂ ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸಲು ಗೌರವಧನ ಆಧಾರದ ಮೇಲೆ ‘ಮಹಿಳಾ ವೈದ್ಯಾಧಿಕಾರಿಗಳು’, ‘ಮಹಿಳಾ ವಸತಿ ನಿಲಯಪಾಲಕರು’, ‘ಮಹಿಳಾ ಸ್ಟಾಫ್ ನರ್ಸ್’ ಹಾಗೂ ‘ಮಹಿಳಾ ಜ್ಯೂನಿಯರ್ ಇಂಜಿನಿಯರ್ (ಸಿವಿಲ್)’ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಬೇಕಾಗಿದ್ದು, ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇದೇ ದಿ. ೨೪ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.