ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಮತ್ತು ವಿಜಯ ದಶಮಿ ನಿಮಿತ್ಯ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅ.೧೮ ಶನಿವಾರದಂದು ಮದ್ಯಾಹ್ನ ೩ಗಂಟೆಗೆ ಪಟ್ಟಣದ ಸಾರಂಗಮಠದಿಂದ ನಾನಾ ವೃತ್ತ, ರಸ್ತೆಗಳ ಮಾರ್ಗವಾಗಿ ಆರ್.ಡಿ.ಪಾಟೀಲ ಕಾಲೇಜಿನ ಆವರಣದವರೆಗೆ ಪಥ ಸಂಚಲನ ನಡೆಯಲಿದೆ. ಬಳಿಕ ಆರ್.ಡಿ.ಪಾಟೀಲ ಕಾಲೇಜಿನ ಮೈದಾನದಲ್ಲಿ ನಡೆಯುವ ಸಭೆಯಲ್ಲಿ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಾಂತ ಸಹ ಬೌದ್ಧಿಕ ಪ್ರಮುಖ ರಾಮಚಂದ್ರ ಎಡಕೆ ಆಗಮಿಸಲಿದ್ದಾರೆ ಎಂದು ಸಂಘದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.