ಉದ್ಘಾಟನೆ ದಿನಪತ್ರಿಕೆ
ವಿಜಯಪುರ: ಇತ್ತೀಚೆಗೆ ಸುರಿದ ಮಳೆಯಿಂದ (ಅತಿವೃಷ್ಟಿಯಿಂದ) ಬಬಲೇಶ್ವರ ತಾಲೂಕಿನಲ್ಲಿ ಹಾನಿಗೊಳಗಾದ ಕೃಷಿ-ತೋಟಗಾರಿಕೆ ಬೆಳೆಗಳಿಗೆ ಕೈಗೊಂಡ ಜಂಟಿ ಸಮೀಕ್ಷೆಯ ಅಂತಿಮ ಪಟ್ಟಿಯನ್ನು ಗ್ರಾಮ ಪಂಚಾಯತ್ ಹಾಗೂ ಚಾವಡಿಗಳಲ್ಲಿ ಪ್ರಕಟಿಸಲಾಗಿದ್ದು, ಪ್ರಕಟಿತ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಅ.೨೩ರೊಳಗೆ ಲಿಖಿತ ರೂಪದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಗ್ರಾಮ ಆಡಳಿತ ಅಧಿಕಾರಿ-ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸುವಂತೆ ಬಬಲೇಶ್ವರ ತಹಶೀಲ್ದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.