ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇತ್ತೀಚೆಗೆ ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತ ಮಹಿಳೆಯರೊಂದಿಗೆ ರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ರೈತಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ-ಸಿಬ್ಬಂದಿಗಳು, ರೈತ ಮಹಿಳೆಯರಿಂದ ಹಣ್ಣಿನ ಸಸಿ ನೆಡಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ವಿಜಯಲಕ್ಷ್ಮಿ ಎಸ್.ಚವ್ಹಾಣ ಹಾಗೂ ಶ್ರೀಮತಿ ಪಾರ್ವತಿ ಪಾಟೀಲ ಅವರು ಮಾತನಾಡಿ, ಕೃಷಿಯಲ್ಲಿ ರೈತ ಮಹಿಳೆಯರ ಪಾತ್ರ ಮತ್ತು ಮಹಿಳೆಯರ ಸಾಧನೆಗಳ ಬಗ್ಗೆ ಮಾತನಾಡಿ, ೨೦೧೬ರಲ್ಲಿ ಭಾರತ ಸರ್ಕಾರವು ಅಕ್ಟೋಬರ್ ೧೫ನ್ನು ರಾಷ್ಟ್ರೀಯ ಮಹಿಳಾ ಕಿಸಾನ್ ದಿವಸ್ ಎಂದು ಆಚರಿಸಲು ನಿರ್ಧರಿಸಿತು ಎಂದು ಹೇಳಿದರು.
ಕೃಷಿ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮಿ ಕಾಮಗೊಂಡ, ಶ್ರೀಮತಿ ಫಾತಿಮಾಬನು ಸುತಾರ ಹಾಗೂ ಶ್ರೀಮತಿ ಗೀತಾ ಭಜಂತ್ರಿ ಉಪಸ್ಥಿತರಿದ್ದರು.