ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ವಿಕಲಚೇತನರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.karnataka.gov.in/2324 sa/signin.aspx ಮೂಲಕ ಹಾಗೂ ನವೀಕರಣಕ್ಕಾಗಿ ವೆಬ್‌ಸೈಟ್https://ssp.postmatric.karnataka.gov.in /ಅಂ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ : ೩೧-೧೦-೨೦೨೩ ಕೊನೆಯ ದಿನವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್ ಆವರಣ, ಕನಕದಾಸ ಬಡಾವಣೆ, ವಿಜಯಪುರ ದೂ: ೦೮೩೫೨-೭೯೬೦೬೦ಗೆ ಅಥವಾ ತಾಲೂಕಾ ಪಂಚಾಯತ್ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ವಿಜಯಪುರ-ರವಿ ರಾಠೋಡ ಮೊ: ೯೦೩೫೫೫೩೩೩೭, ಇಂಡಿ-ಪರಶುರಾಮ ಭೊಸಲೆ ಮೊ: ೯೯೭೨೪೪೧೪೬೪, ಸಿಂದಗಿ- ಮುತ್ತುರಾಜ ಸಾತಿಹಾಳ ಮೊ: ೯೯೮೦೦೧೯೬೩೫, ಬಸವನಬಾಗೇವಾಡಿ- ಎಸ್.ಡಿ.ಬಿರಾದಾರ ಮೊ: ೮೭೨೨೧೩೫೬೬೦ ಹಾಗೂ ಮುದ್ದೇಬಿಹಾಳ-ಎಸ್.ಕೆ.ಘಾಟಿ ಮೊ: ೯೭೪೦೬೮೨೯೭೯ ಇವರನ್ನು ಸಂಪರ್ಕಿಸುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment