ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಗಾಯನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶ್ರೀಮತಿ ವಿಜಯಾ ಕೋಲ್ಹಾರ ಅವರಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಹಾಗೂ ಸರ್ಕಾರಿ ನಿವೃತ್ತ ನೌಕರರ ಸಂಘ ವತಿಯಿಂದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಎಸ್. ಪಿ. ಬಿರಾದಾರ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ, ಜಗದೀಶ ಕೆಂಪಲಿಂಗಣ್ಣವರ, ರೇಣುಕಾ ಹುಣಸಗಿಡದ, ಯೋಶದ ಗುಜ್ಷರ, ಎ.ಎಸ್. ನಿಂಬಾಳ, ಮಲ್ಲಿಕಾರ್ಜುನ ಶಿಮಗೊಂಡ ಇತರರು ಉಪಸ್ಥಿತರಿದ್ದರು.